HomeKarnataka Newsನೂತನ ಜಿಲ್ಲಾ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡಲು ಕೇಂದ್ರದ ನಾಯಕರಿಂದ ಸಭೆ: ಸಿಎಂ ಡಿ ಕೆ ಶಿವಕುಮಾರ್

ನೂತನ ಜಿಲ್ಲಾ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡಲು ಕೇಂದ್ರದ ನಾಯಕರಿಂದ ಸಭೆ: ಸಿಎಂ ಡಿ ಕೆ ಶಿವಕುಮಾರ್

For Dai;y Updates Join Our whatsapp Group

ಬೆಂಗಳೂರು: “ನೂತನವಾಗಿ ಜಿಲ್ಲಾ ಅಧ್ಯಕ್ಷರು ನೇಮಕಗೊಂಡಿದ್ದು, ಅವರಿಗೆ ಮಾರ್ಗದರ್ಶನ ನೀಡಲು ಹೈಕಮಾಂಡ್ ನಾಯಕರು ಸಭೆ ಕರೆದಿದ್ದಾರೆ” ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಸದಾಶಿವನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಸುರ್ಜೇವಾಲ ಅವರು ಆಗಮಿಸಿರುವ ಬಗ್ಗೆ ಕೇಳಿದಾಗ ಅವರು ಈ ರೀತಿ ಉತ್ತರಿಸಿದರು.

ನಾಳೆಯಿಂದ 3 ದಿನಗಳ ಕಾಲ ವಿವಿಧ ಜಿಲ್ಲೆಗಳ ಪ್ರವಾಸದ ಬಗ್ಗೆ ಕೇಳಿದಾಗ, “ಇಂದಿನಿಂದ (ಬುಧವಾರ) ಕಲಬುರಗಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಪ್ರವಾಸ ಮಾಡಲಿದ್ದೇನೆ. ವಿಧಾನ ಮಂಡಲ ಅಧಿವೇಶನದಲ್ಲಿ ಬರಗಾಲ ಹಾಗೂ ಕಸ್ತೂರಿ ರಂಗನ್ ವರದಿಯ ಕುರಿತಂತೆ ಚರ್ಚೆ ನಡೆಯಲಿದೆ” ಎಂದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img