ವಿಜಯಸಾಕ್ಷಿ ಸುದ್ದಿ, ಬೆಂಗಳೂರು : 2024ನೇ ಸಾಲಿನ ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆನಂದಸ್ವಾಮಿ ಗಡ್ಡದೇವರಮಠ ಅವರನ್ನು ಅಧಿಕೃತವಾಗಿ ಘೋಷಿಸಿದ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಗದಗ-ಹಾವೇರಿ ಕ್ಷೇತ್ರದ ಎಲ್ಲ ಶಾಸಕರು ಹಾಗೂ ಮುಖಂಡರ ಸಭೆ ನಡೆಸಲಾಯಿತು.
Advertisement
ಈ ಸಂದರ್ಭದಲ್ಲಿ ಹಾವೇರಿ ಶಾಸಕರು ಹಾಗೂ ಉಪಸಭಾಪತಿಗಳಾದ ರುದ್ರಪ್ಪ ಲಮಾಣಿ, ರೋಣ ಶಾಸಕ ಜಿ.ಎಸ್. ಪಾಟೀಲ, ಹಾನಗಲ್ ಶಾಸಕ ಶ್ರೀನಿವಾಸ ಮಾನೆ, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ, ಹಿರೇಕೆರೂರ ಶಾಸಕ ಯು.ಬಿ. ಬಣಗಾರ, ರಾಣೇಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ, ಲೋಕಸಭಾ ಮಾಜಿ ಸದಸ್ಯ ಐ.ಜಿ. ಸನದಿ ಸೇರಿದಂತೆ ಹಿರಿಯ ಮುಖಂಡರು ಉಪಸ್ಥಿತರಿದ್ದರು.