ವಿಜಯಸಾಕ್ಷಿ ಸುದ್ದಿ, ಗದಗ :ನಗರದ ಎಪಿಎಂಸಿ ಆವರಣದಲ್ಲಿರುವ ಕೆ.ಎಚ್. ಪಾಟೀಲ ಸಭಾಂಗಣದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ಮಾ. 20ರಂದು ಸಂಜೆ 4ಕ್ಕೆ ಜರುಗಲಿದೆ.
ಹಾವೇರಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಉಪಸ್ಥಿತಿಯಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ರೋಣ ಮತಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಸಭೆಯನ್ನು ಉದ್ಘಾಟಿಸುವರು.
ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರು, ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ, ಗ್ರಾಮ ಪಂಚಾಯತ, ಎಪಿಎಂಸಿ ಪಕ್ಷದ ಅಧ್ಯಕ್ಷರು ಹಾಗೂ ಸದಸ್ಯರು, ನಗರಸಭೆ, ಪಟ್ಟಣ ಪಂಚಾಯ್ತಿ, ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್ಸಿ-ಎಸ್ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐಎನ್‌ಟಿಯುಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವೀಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರೀರ್ಪಾಮ್ಸ್ ವಿಭಾಗ, ಐಟಿ ಮತ್ತು ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗದ ಅಧ್ಯಕ್ಷರು ಹಾಗೂ ಸದಸ್ಯರು, ಪಕ್ಷದ ಅಭಿಮಾನಿಗಳು ಕಾರ್ಯಕ್ರಮಕ್ಕೆ ಹಾಜರಾಗಬೇಕು ಎಂದು ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ವಿ.ಬಿ. ಸೋಮನಕಟ್ಟಿಮಠ, ಗದಗ-ಬೆಟಗೇರಿ ಶಹರ ಬ್ಲಾಕ್ ಕಾಂಗ್ರೆಸ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ವಿನಂತಿಸಿದ್ದಾರೆ.
ಕಾನೂನು, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಜವಳಿ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಮುಖ್ಯಸಚೇತಕ, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಜಾತಾ ದೊಡ್ಡಮನಿ ಪಾಲ್ಗೊಳ್ಳುವರು.