ಶಿಲ್ಲಾಂಗ್:- ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ವೇಳೆ ಸಂಭವಿಸಿದ ಸ್ಫೋಟದಲ್ಲಿ ಅಸ್ಸಾಂನ 16 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮೇಘಾಲಯದ ಪೂರ್ವ ಜೈನ್ತಿಯಾ ಹಿಲ್ಸ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಜರುಗಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಗಣಿಯಿಂದ 16 ಶವಗಳನ್ನು ಹೊರತೆಗೆದಿದ್ದು, ಗಾಯಾಳುಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ನಂತರ ಶಿಲ್ಲಾಂಗ್‌ಗೆ ಕರೆದೊಯ್ಯಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲು ಪೊಲೀಸರು ರಾಜ್ಯ ವಿಪತ್ತು ನಿರ್ವಹಣಾ ಪಡೆಯಿಂದ ಸಹಾಯ ಪಡೆದುಕೊಂಡರು.
ಇನ್ನೂ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಸ್ಥಳದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಚಟುವಟಿಕೆಗಳ ಸಮಯದಲ್ಲಿ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಸ್ಫೋಟದ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.



