ಕೇಂದ್ರದಿಂದ ಹೆಚ್ ಡಿಕೆ ಅನುಮತಿ ಕೊಡಿಸಿದ್ರೆ ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಸಿದ್ಧ: ಸಿದ್ದರಾಮಯ್ಯ!

0
Spread the love

ಬೆಂಗಳೂರು:– ಕೇಂದ್ರದಿಂದ ಹೆಚ್ ಡಿಕೆ ಅನುಮತಿ ಕೊಡಿಸಿದ್ರೆ ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿದರೆ ಅಣೆಕಟ್ಟು ನಿರ್ಮಾಣ ಕಾರ್ಯ ಆರಂಭಿಸಲು ನಮ್ಮ ಸರ್ಕಾರ ಸಿದ್ಧವಿದೆ ಎಂದರು.

ಮಂಡ್ಯ ಸಂಸದರು ಹಾಗೂ ಕೇಂದ್ರ ಸಚಿವರಾದ ಕುಮಾರಸ್ವಾಮಿ ಮೇಕೆದಾಟು ಅನುಮತಿ ಕೊಡಿಸಬೇಕು. ಮೇಕೆದಾಟು ಯೋಜನೆ ಜಾರಿಯಿಂದ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಬಹುದು. ವಿದ್ಯುತ್ ಅನ್ನು ಸಹ ಉತ್ಪಾದಿಸಬಹುದು. ಮಳೆಗಾಲದಲ್ಲಿ ಸಮುದ್ರ ಸೇರುವ ನೀರನ್ನು ಸಂಗ್ರಹಿಸಿಟ್ಟು, ಜಲಾಶಯಗಳಲ್ಲಿ ನೀರಿನ ಕೊರತೆಯಿದ್ದಾಗ ತಮಿಳುನಾಡಿಗೂ ನೀರು ಬಿಡಬಹುದು ಎಂದು ತಿಳಿಸಿದ್ದಾರೆ. ಮಂಡ್ಯದ ಸಂಸದ ಕುಮಾರಸ್ವಾಮಿ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅವರು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿದರೆ ಅಣೆಕಟ್ಟು ನಿರ್ಮಾಣ ಕಾರ್ಯ ಆರಂಭಿಸಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here