ಮೇಕೆದಾಟು ಯೋಜನೆಯಿಂದ ಬೆಂಗಳೂರಿನ ನೀರಿನ ಬವಣೆಗೆ ಮುಕ್ತಿ ಸಿಗಲಿದೆ: ಹೆಚ್.ಡಿ ದೇವೇಗೌಡರು

0
Spread the love

ನವದೆಹಲಿ: ನೀರಿನ ಬವಣೆ ನೀಗಿಸಬೇಕಾದ್ರೆ ಮೇಕೆದಾಟು ಯೋಜನೆಗೆ ಅನುಮತಿ ಸಿಗಬೇಕಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿನ ನೀರಿನ ಬವಣೆ ನೀಗಿಸಬೇಕಾದರೆ ಮೇಕೆದಾಟು ಯೋಜನೆಗೆ ಅನುಮತಿ ಸಿಗಬೇಕಿದೆ. ಎಲ್ಲಾ ರಾಜಕೀಯ ಬದಿಗಿಟ್ಟು ಈ ಯೋಜನೆಗೆ ಬೆಂಬಲ ಕೊಡಬೇಕಿದೆ ಎಂದು ಮನವಿ ಮಾಡಿದರು.

Advertisement

ರಾಜ್ಯದಲ್ಲಿ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ಮೇಕೆದಾಟು ಯೋಜನೆಗಾಗಿ ಕೆಲಸ ಮಾಡಿವೆ. ಆದರೆ ಇಲ್ಲಿಯವರೆಗೂ ಯಶಸ್ಸು ಸಿಕ್ಕಿಲ್ಲ. ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರ ಸರ್ಕಾರ ಆದಷ್ಟು ಬೇಗ ಒಪ್ಪಿಗೆ ನೀಡಬೇಕು ಎಂದು ಅವರು ಕೋರಿದರು.

ಇನ್ನೂ ಬೆಂಗಳೂರು ನಗರ ಅಗಾಧವಾಗಿ ಬೆಳೆಯುತ್ತಿದೆ. ಉದ್ಯೋಗ ಅರಸಿ ದೇಶದ ಎಲ್ಲಾ ಮೂಲೆಗಳಿಂದ ಜನರು ಅಲ್ಲಿಗೆ ಹೋಗುತ್ತಿದ್ದಾರೆ. ಎಲ್ಲರಿಗೂ ಆಶ್ರಯ ನೀಡುವ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹಳ ಗಂಭೀರವಾಗಿದೆ ಎಂದು ಮಾಜಿ ಪ್ರಧಾನಿ ಹೇಳಿದರು. 1.45 ಕೋಟಿ ಜನಸಂಖ್ಯೆ ಇರುವ ಬೆಂಗಳೂರಿಗೆ 16 ಟಿಎಂಸಿ ಅಡಿಯಷ್ಟು ಕಾವೇರಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ.

ಆದರೆ, ನಗರದ ಬೇಡಿಕೆಗೆ ಹೋಲಿಸಿದರೆ ಈ ನೀರು ಬಹಳ ಕಡಿಮೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ. ಒಂದು ಟ್ಯಾಂಕರ್ ನೀರಿಗೆ 3000 ರೂ. ತೆರಬೇಕಿದೆ. ಇದು ಎಷ್ಟು ಅನ್ಯಾಯ ಎಂದರೆ, ಕೇವಲ ನಾಲ್ಕು ಜನರಿರುವ ಒಂದು ಕುಟುಂಬ ಪ್ರತೀ ತಿಂಗಳು ನೀರಿಗಾಗಿ 20,000 ರೂ. ಖರ್ಚು ಮಾಡಬೇಕಿದೆ. ಇದು ಕಳವಳಕಾರಿ ಎಂದು ಅವರು ಆತಂಕ ವ್ಯಕ್ತಪಡಿಸಿದರು.

 


Spread the love

LEAVE A REPLY

Please enter your comment!
Please enter your name here