ಕರ್ನಾಟಕದ ಗಂಡಸರೇ ಕಾಂಗ್ರೆಸ್‌ಗೆ ಮತ ಹಾಕಬೇಡಿ: ಬಿಜೆಪಿ ಶಾಸಕ ಯತ್ನಾಳ್ ಕರೆ!

0
Spread the love

ವಿಜಯಪುರ:- ಕರ್ನಾಟಕದಲ್ಲಿ ಬಸ್ ಟಿಕೆಟ್ ದರ 15% ಏರಿಕೆ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಗಂಡಸರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಬಾರದು. ಹೆಣ್ಣುಮಕ್ಕಳಿಗೆ ಉಚಿತ ಕೊಟ್ಟು ಗಂಡಸರಿಗೆ ಹೆಚ್ಚಿನ ದುಡ್ಡು ಹಾಕಿದ್ದಾರೆ.

ಗಂಡಸರು ಏನು ಪಾಪ ಮಾಡಿದ್ದಾರೆ? ಇದು ಹೆಣ್ಣು ಮಕ್ಕಳಿಗೂ ಅನ್ಯಾಯವಾಗುತ್ತದೆ. ಮಕ್ಕಳು ಮನೆಯ ಯಜಮಾನರಿಗೂ ಅನ್ಯಾಯವಾಗುತ್ತದೆ. ಇವರ ರಕ್ಷಣೆ ಮಾಡಬೇಕೆಂದರೆ ಹೆಣ್ಣು ಮಕ್ಕಳೂ ಸಹ ಕಾಂಗ್ರೆಸ್‌ಗೆ ಮತ ಹಾಕಬಾರದೆಂದು ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ಪ್ರತಿಭಟನೆಯಲ್ಲಿ ವಿಜಯೇಂದ್ರ ಭಾಗಿ ಆಗದ ವಿಚಾರವಾಗಿ ಮಾತನಾಡಿ, ವಿಜಯೇಂದ್ರ ಅವರ ನೇತೃತ್ವದಲ್ಲಿ ಎಲ್ಲೆಡೆ ಪ್ರತಿಭಟನೆ ಎಂದು ಹೇಳಿಕೊಂಡಿದ್ದರು. ಪಾಪಾ ವಿಜಯೇಂದ್ರ ಅವರಿಗೆ ಏನು ಕೆಲಸ ಇತ್ತು ಗೊತ್ತಿಲ್ಲ. ನಿನ್ನೆ ಮೂರು ಕಡೆ ಹೋರಾಟ ಆಗಿದೆ.

ಒಂದು ವಕ್ಫ್ ವಿರುದ್ಧ, ಪ್ರಿಯಾಂಕ್ ಖರ್ಗೆ ವಿರುದ್ಧ ಹೋರಾಟ, ಇನ್ನೊಂದು ಬಾಣಂತಿಯರ ಸಾವು ಹೋರಾಟ. ಆ ಪೈಕಿ ವಿಜಯೇಂದ್ರ ಅವರು ಬಾಣಂತಿಯರ ಸಾವಿನ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಇದರಿಂದ ನಮ್ಮಲ್ಲಿ ಸಾಮೂಹಿಕ ನಾಯಕತ್ವ ಹೇಗಿದೆ ಎನ್ನುವುದು ಗೊತ್ತಾಗುತ್ತದೆ. ಅವರು ಅಲ್ಲಿ ಮಾಡಿದ್ದಾರೆ, ನಾವು ಇಲ್ಲಿ ಮಾಡಿದ್ದೇವೆ ಅಷ್ಟೇ ಎಂದು ಕಾಲೆಳದರು.


Spread the love

LEAVE A REPLY

Please enter your comment!
Please enter your name here