ರಾಮನಗರ: ಮಾನಸಿಕ ಒತ್ತಡಕ್ಕೆ ಒಳಗಾಗಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕಿನ ದಯನಂದ ಸಾಗರ್ ಕಾಲೇಜಿನಲ್ಲಿ ನಡೆದಿದೆ. ಅನಾಮಿಕ(19) ಮೃತ ದುರ್ಧೈವಿಯಾಗಿದ್ದು, ಅನಾಮಿಕ ಕೇರಳ ಮೂಲದ ಕಣ್ಣೂರಿನ ವಿದ್ಯಾರ್ಥಿನಿ ಆಗಿದ್ದು, ಮೊದಲ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಾಂಗ ಮಾಡ್ತಿದ್ದರು.
Advertisement
ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಸ್ಟೆಲ್‌ನಲ್ಲಿ ಊಟಕ್ಕೆ ಬಾರದ ಹಿನ್ನೆಲೆಯಲ್ಲಿ ಸಹ ವಿದ್ಯಾರ್ಥಿನಿಯರು ರೂಮ್ ಬಳಿ ಹೋಗಿದ್ದಾರೆ. ಬಾಗಿಲು ತಟ್ಟಿದ್ದರೂ ತೆಗೆಯದೇ ಇದ್ದರಿಂದ ಕಿಟಕಿಯಿಂದ ನೋಡಿದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿರುವುದು ಪತ್ತೆಯಾಗಿದೆ. ಹಾರೋಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.