ಕೋಲಾರ:- ಮಾನಸಿಕ ಅಸ್ವಸ್ಥ ಮಹಿಳೆಯನ್ನು ಕೊಲೆ ಮಾಡಿ ಬಳಿಕ ರೇಪ್ ಮಾಡಿದ ಸೈಕೋ ಕಿಲ್ಲರ್ ನನ್ನು ಅರೆಸ್ಟ್ ಮಾಡಲಾಗಿದೆ.
Advertisement
ಮುಳಬಾಗಿಲು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಆಟೋ ಡ್ರೈವರ್ ಸೈಯ್ಯದ್ ಸುಹೇಲ್ ಎಂದು ಗುರುತಿಸಲಾಗಿದೆ. ಆರೋಪಿ ಸೆ.24 ರಂದು 50 ವರ್ಷದ ಮಹಿಳೆಯನ್ನು ಕೊಲೆ ಮಾಡಿ ಬಳಿಕ ಅತ್ಯಾಚಾರ ಮಾಡಿದ್ದ.
ಮಹಿಳೆಯನ್ನು ಪಳ್ಳಿಗರಪಾಳ್ಯದ ಸುಶೀಲಮ್ಮ ಎಂದು ಗುರುತಿಸಲಾಗಿತ್ತು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಬಲೆ ಬೀಸಿದ್ದರು. ಇದೀಗ ಆರೋಪಿಯ ಬಂಧನವಾಗಿದ್ದು. ತನಿಖೆ ನಡೆಯುತ್ತಿದೆ.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.