ಬುದ್ಧಿಮಾಂದ್ಯ ಮಕ್ಕಳು ದೇವರಿಗೆ ಸಮಾನ

0
Spread the love

ವಿಜಯಸಾಕ್ಷಿ ಸುದ್ದಿ, ರೋಣ: ಸಾಮಾಜಿಕ ಕಾರ್ಯ ಚಟುವಟಿಕೆಗಳ ಅರಿವು ಇಲ್ಲದ ಬುದ್ಧಿಮಾಂದ್ಯ ಮಕ್ಕಳು ದೇವರಿಗೆ ಸಮಾನ ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷಯ ಪಾಟೀಲ ಹೇಳಿದರು.

Advertisement

ಅವರು ಬುಧವಾರ ಜನ್ಮದಿನದ ನಿಮಿತ್ತ ಅಭಿಮಾನಿಗಳು ಹಮ್ಮಿಕೊಂಡಿದ್ದ ಬುದ್ಧಿಮಾಂದ್ಯ ಮಕ್ಕಳಿಕೆ ಹಣ್ಣು ಹಾಗೂ ಆಟಿಕೆ ಸಾಮಾಗ್ರಿಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಬುದ್ಧಿಮಾಂದ್ಯ ಮಕ್ಕಳಿಗೆ ಪ್ರಪಂಚದ ಬಗ್ಗೆ ತಿಳುವಳಿಕೆ ಇರುವುದಿಲ್ಲ. ಅಂತಹ ಮಕ್ಕಳ ದೈಹಿಕ ಸಾಮಾರ್ಥ್ಯವನ್ನು ಹೆಚ್ಚಿಸಲು ಅಗತ್ಯ ನೆರವು ನೀಡುವುದು ಇಂದಿನ ದಿನಮಾನಗಳಲ್ಲಿ ಅವಶ್ಯಕವಾಗಿದೆ. ಹೆತ್ತ ತಂದೆ-ತಾಯಿಗಳಿಗೆ ಎಲ್ಲ ಮಕ್ಕಳು ಸಹ ಮುದ್ದಾಗಿ ಕಾಣುವುದು ಪುಣ್ಯದ ಫಲವಾಗಿದ್ದು, ಚಿಕ್ಕ ವಯಸ್ಸಿನಲ್ಲಿ ಮಕ್ಕಳು ಬುದ್ಧಿಮಾಂದ್ಯರಾಗಿರಬಹುದು. ಆದರೆ ಒಳ್ಳೆಯ ಆರೈಕೆ ಸಿಕ್ಕರೆ ಅವರೂ ಸಹ ಸಮಾಜದ ಮುಖ್ಯ ವಾಹಿನಿಗೆ ಬರಬಲ್ಲರು ಎಂದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಲ್ಲದಕ್ಕೂ ಪರಿಹಾರಗಳಿವೆ. ಮುಖ್ಯವಾಗಿ ಬುದ್ಧಿಮಾಂದ್ಯ ಮಕ್ಕಳಿಗೆ ಗುಣಮಟ್ಟದ ಆರೋಗ್ಯ ತಪಾಸಣೆ ನಡೆಯಬೇಕು. ಆ ನಿಟ್ಟಿನಲ್ಲಿ ಸರಕಾರಿ ಅಥವಾ ಖಾಸಗಿ ವೈದ್ಯರು ಈ ಮಕ್ಕಳ ಬಗ್ಗೆ ವಿಶೇಷ ಮುತುವರ್ಜಿಯನ್ನು ವಹಿಸಬೇಕು. ಮುಖ್ಯವಾಗಿ ಮಕ್ಕಳಿಗೆ ಧೈರ್ಯದ ಜೊತೆಗೆ ಸಂಭಾಷಣೆ ನಡೆಸುವ ಕಲಾತ್ಮಕ ವಿಷಯಗಳ ಕುರಿತು ತಿಳುವಳಿಕೆ ನೀಡಬೇಕು ಎಂದರು.

ಇದೇ ಸಂಧರ್ಭದಲ್ಲಿ ಅವರು ಬುದ್ಧಿಮಾಂದ್ಯ ಮಕ್ಕಳ ಆರೈಕೆ ಸಿಬ್ಬಂದಿಗಳಿAದ ಅಗತ್ಯ ಮಾಹಿತಿ ಪಡೆದುಕೊಂಡರು. ಅಭಿಷೇಕ ನವಲಗುಂದ, ಮುತ್ತು ನವಲಗುಂದ, ಯಲ್ಲಪ್ಪ ಕಿರೇಸೂರ, ಮಹೇಶ ಕಳಸಣ್ಣವರ, ಅಸ್ಲಂ ಕೊಪ್ಪಳ, ಸೈಫ್ ತಹಸೀಲ್ದಾರ್, ವಿನಾಯಕ ಜಕ್ಕಣಗೌಡ್ರ, ಪ್ರದೀಪ ಯಳವತ್ತಿ, ಬಶೀರ ಕಟ್ಟಿಮನಿ, ಆಸ್ಪಾಕ ಮುಲ್ಲಾ, ಶಬಾಜ ಗದಗಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here