HomeKarnataka Newsಮುಂದಿನ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ಮಳೆ! ಹವಾಮಾನ ಇಲಾಖೆ ಎಚ್ಚರಿಕೆ

ಮುಂದಿನ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ಮಳೆ! ಹವಾಮಾನ ಇಲಾಖೆ ಎಚ್ಚರಿಕೆ

For Dai;y Updates Join Our whatsapp Group

Spread the love

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ವರದಿಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಜಿಲ್ಲೆಗಳಲ್ಲಿ ಬಲವಾದ ಗಾಳಿಯೂ ಬೀಸುವ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಮತ್ತು ಉತ್ತರ ಕನ್ನಡ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನಲ್ಲಿ ಕಲ್ಬುರ್ಗಿ, ಬೀದರ್, ರಾಯಚೂರು, ಕೊಪ್ಪಳ ಮತ್ತು ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಸೇರಿದಂತೆ ಹಲವು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ ಬಳ್ಳಾರಿ, ಮೈಸೂರು, ಚಿಕ್ಕಮಗಳೂರು, ಕೊಡಗು, ಹಾಸನ, ತುಮಕೂರು, ಚಾಮರಾಜನಗರ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಹವಾಮಾನ ಇಲಾಖೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಿದ್ದು, ಬಿರುಗಾಳಿ ಸಂದರ್ಭಗಳಲ್ಲಿ ಮರಗಳ ಕೆಳಗೆ ಅಥವಾ ಹಳೆಯ ಕಟ್ಟಡಗಳ ಬಳಿ ಆಶ್ರಯ ಪಡೆಯಬಾರದೆಂದು ಸಲಹೆ ನೀಡಿದೆ. ವಾಹನ ಚಾಲಕರು ಸಹ ಜಾಗರೂಕತೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!