ದೇವನಹಳ್ಳಿ: ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಐದು ತಿಂಗಳು ಕಂತು ಡ್ಯೂ ಇದೆ ಅಂತ ಕುಟುಂಬವನ್ನು ಮನೆಯಿಂದ ಹೊರ ಹಾಕಿದ್ದ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಮತ್ತೆ ಮೈಕ್ರೋ ಪೈನಾನ್ಸ್ ಕಿರುಕುಳಕ್ಕೆ ವ್ಯಕ್ತಿ ಬಲಿಯಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಗೋಕರೆ ಗ್ರಾಮದಲ್ಲಿ ನಡೆದಿದೆ.
ಜನ ಸ್ಮಾಲ್ ಪೈನಾನ್ಸ್ ಬ್ಯಾಂಕ್ ವಿರುದ್ದ ಸೆಲ್ಪಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಸುಬ್ರಹ್ಮಣಿ ( 38) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು,
ಜನ ಫೈನಾನ್ಸ್ ಬ್ಯಾಂಕ್ನಲ್ಲಿ ಸುಬ್ರಹ್ಮಣಿ 5 ಲಕ್ಷ ರೂ ಲೋನ್ ಪಡೆದಿದ್ದರು. ಇತ್ತೀಚಿಗೆ ಕಂತು ಡ್ಯೂ ಇದ್ದಿದ್ದಕ್ಕೆ ಮನೆ ಜಪ್ತಿ ಮಾಡುವುದಾಗಿ ಬ್ಯಾಂಕ್ನಿಂದ ನೋಟಿಸ್ ಜಾರಿ ಮಾಡಿದ್ದರು. ಹೀಗಾಗಿ ನನ್ನ ಸಾವಿಗೆ ಜನ ಫೈನಾನ್ಸ್ ಬ್ಯಾಂಕ್ ಕಾರಣ ಅಂತಾ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿದ್ದಾರೆ. ಜನ ಫೈನಾನ್ಸ್ ಬ್ಯಾಂಕ್ ವಿರುದ್ಧ ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.