ಮೈಕ್ರೋ ಫೈನಾನ್ಸ್ ಕಿರುಕುಳ ಆರೋಪ: ದೂರು ಕೊಟ್ಟರೆ ಕ್ರಮ ಕೈಗೊಳ್ಳುತ್ತೇವೆ – ಸತೀಶ್ ಜಾರಕಿಹೊಳಿ

0
Spread the love

ಬೆಳಗಾವಿ: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾವೇರಿ, ಮೈಸೂರು, ಉಡುಪಿ, ಚಿಕ್ಕಮಗಳೂರು ಮುಂತಾದ ಜಿಲ್ಲೆಗಳಲ್ಲಿ ಸಾಲದ ಬಾಧೆಗೆ ಸಿಲುಕಿ ಅನೇಕರು ಊರು, ಮನೆ ಬಿಟ್ಟು ಹೋಗಿದ್ದಾರೆ. ಮತ್ತೆ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಈ ವಿಚಾರವಾಗಿ ಕುಟುಂಬಸ್ಥರು ದೂರು ಕೊಟ್ಟರೆ ಫೈನಾನ್ಸ್ ನವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

Advertisement

ಬೆಳಗಾವಿಯಲ್ಲಿ ಮಾತನಾಡಿದ ಅವರು, ಸುಮಾರು ಕಡೆ ಕಿರುಕುಳ ಕೊಡುವ ವರದಿಗಳು ಬರ್ತಿವೆ. ತೊಂದರೆ ಕೊಟ್ಟರೆ ದೂರು ದಾಖಲು ಮಾಡುವಂತೆ ತಿಳಿಸಿದ್ದೇವೆ. ಫೈನಾನ್ಸ್ ಕಿರುಕುಳದ ಬಗ್ಗೆ ಗೊಂದಲ ಇದೆ. ಸಾಲ‌ ಪಡೆಯೋದು, ಕಿರುಕುಳ ಕೋಡೊದು ಬೇರೆ ವಿಚಾರ. ಆದರೆ ಸಬ್ಸಿಡಿ ಹೆಸರಿನಲ್ಲಿ ಸಾವಿರಾರು ಜನರಿಗೆ ಸಾಲ ಕೊಟ್ಟಿದ್ದಾರೆ. ಹಣ ತುಂಬುವ ವಿಚಾರದಲ್ಲಿ ಈಗ ಸಂಘರ್ಷ ಆರಂಭವಾಗಿದೆ.

ಈಗಾಗಲೇ ಡಿಸಿ ನೇತೃತ್ವದಲ್ಲಿ ಒಂದು ಸಭೆ ನಡೆಸಿದ್ದೇನೆ. ಎರಡು ತಿಂಗಳ‌ ಸಮಯ ಕೇಳಿದ್ದೇವೆ, ಏನಾದರೂ ಅದಕ್ಕೆ ಪರಿಹಾರ ಹುಡುಕುತ್ತೇವೆ. ಒಂದು ತಿಂಗಳಲ್ಲಿ ಏನು ಸಾಧ್ಯವೋ ಅದಕ್ಕೆ ಪರಿಹಾರಕ್ಕೆ ಮಾಡುತ್ತೇವೆ.

ಇನ್ನೂ ಶಿರೂರನಲ್ಲಿ ಕೂಡ ಮಹಿಳೆ ಆತ್ಮಹತ್ಯೆ ಪ್ರಕರಣ ನಡೆದಿದೆ, ದೂರು ದಾಖಲು ಮಾಡಲು ಹೇಳಿದ್ದೇನೆ. ಮಧ್ಯವರ್ತಿಗಳ ಜತೆಗೆ ಫೈನಾನ್ಸ್ ನವರು ಭಾಗಿದಾರರಾಗಿದ್ದಾರೆ ಎಂಬ ಆರೋಪವಿದೆ. ಮಧ್ಯವರ್ತಿಗಳಿಗೆ ಹಣ ಕೊಟ್ಟಿದ್ದಾರೆ, ಪೊಲೀಸ್ ತನಿಖೆಗೆ ಸೂಚನೆ ಕೊಟ್ಟಿದ್ದೇನೆ. ವರದಿ ಬಂದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದರು. ತಾರಿಹಾಳದಲ್ಲಿ‌ ಒಂದು ತಿಂಗಳ ಬಾಣಂತಿ ಮನೆಯಿಂದ ಹೊರಹಾಕಿ ಮನೆ ಹರಾಜಿಗಿಟ್ಟ ಪ್ರಕರಣ ಸಂಬಂಧಿಸಿದಂತೆ ಕುಟುಂಬಸ್ಥರು ದೂರು ಕೊಟ್ಟರೆ, ಫೈನಾನ್ಸ್ ನವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದರು.


Spread the love

LEAVE A REPLY

Please enter your comment!
Please enter your name here