ಚಿತ್ರದುರ್ಗ:- ಗೃಹಿಣಿಯೋರ್ವರು ಸೂಸೈಡ್ ಮಾಡಿಕೊಂಡಿದ್ದು, ಮೈಕ್ರೋ ಫೈನಾನ್ಸ್ ಕಿರುಕುಳ ಆರೋಪ ಕೇಳಿಬಂದಿದೆ.
Advertisement
ಈ ಘಟನೆ ತಾಲೂಕಿನ ಕವಾಡಿಗರಹಟ್ಟಿಯಲ್ಲಿ ಜರುಗಿದೆ. 30 ವರ್ಷದ ನೇತ್ರಾ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ನೇತ್ರಾ ಮೈಕ್ರೋ ಫೈನಾನ್ಸ್‌ನಲ್ಲಿ 50 ಸಾವಿರ ರೂ. ಸಾಲ ಪಡೆದಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಹೀಗಾಗಿ ಮೃತಳ ಸಂಬಂಧಿಕರಿಂದ ಮೈಕ್ರೋ ಫೈನಾನ್ಸ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದೆ.