ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಚಳಿ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕಾರಾವಳಿಗೂ ಮಳೆ ಮುನ್ಸೂಚನೆ ನೀಡಲಾಗಿದೆ. ಆದ್ರೆ ಹವಾಮಾನ ವೈಪರೀತ್ಯ ಕಾರಣ ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮೈಕೊರೆಯುವಂತಹ ಚಳಿ ಇರಲಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಚೆನ್ನೈನಲ್ಲಿ ಭಾರಿ ಮಳೆಯಾಗುತ್ತಿದೆ. ಜೊತೆಗೆ ದಟ್ಟವಾದ ಮಂಜು ಅವರಿಸಿದ್ದು ರಸ್ತೆಗಳು ಕಾಣದಂತಾಗಿದೆ. ರಾಮನಾಥಪುರಂ, ತಿರುಚಿರಾಪಳ್ಳಿ, ಪೆರಂಬಲೂರು, ಕಲ್ಲಕುರಿಚಿ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ವಿಪರೀತ ಚಳಿಯಿಂದ ಜ್ವರ, ಕೆಮ್ಮು, ಶೀತದಂತಹ ಕಾಯಿಲೆಗಳು ಭಾದಿಸಲಿದ್ದು, ಆರೋಗ್ಯದ ಮೇಲೆ ನಿಗಾ ಇಡುವಂತೆ ವೈದ್ಯರು ಸೂಚಿಸಿದ್ದಾರೆ.
ಇನ್ನೂ ಕರ್ನಾಟಕದಲ್ಲಿ ಚಳಿ ಜೋರಾಗಿದೆ. ಸಂಜೆಯಾಗುತ್ತಿದ್ದಂತೆ ಶುರುವಾದ ಚಳಿ ಬೆಳಗಿನ ಜಾವ ಸೂರ್ಯೋದಯ ತನಕ ಬಿಡುವುದಿಲ್ಲ. ಬೆಳಗಿನಲ್ಲಿ ಮನೆಯ ಹೊಸ್ತಿಲು ದಾಟಿ ಹೊರ ಬಂದರೆ ಸಾಕು ಗಡಗಡ ಮೈ ನಡುಗಿಸಿ ಹಲ್ಲು ಗಟಿಯೂರುವಂತೆ ಮಾಡುವ ಮಾಗಿಯ ಮೈಕೊರೆಯುವ ಚಳಿಗೆ ಜನರು ಬೆಂಕಿ ಹಚ್ಚಿ ಮೈ ಕಾಯಿಸಿಕೊಳ್ಳುತ್ತಿದ್ದಾರೆ.