ನವದೆಹಲಿ: ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಫಿನ್ಲ್ಯಾಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಿಲಿಟರಿ ಕಾರ್ಯಾಚರಣೆಗಳ ಬದಲಿಗೆ ರಾಜತಾಂತ್ರಿಕ ಮಾರ್ಗದ ಮೂಲಕ ಸಂಘರ್ಷಗಳನ್ನು ಪರಿಹರಿಸಬೇಕು ಎಂದು ಅಭಿಪ್ರಾಯಪಟ್ಟರು.
ಭಾರತ ಮತ್ತು ಫಿನ್ಲ್ಯಾಂಡ್ ಎರಡೂ ಮಿಲಿಟರಿ ಸಂಘರ್ಷದಿಂದ ಯಾವುದೇ ಸಮಸ್ಯೆ ಶಾಶ್ವತವಾಗಿ ಪರಿಹಾರವಾಗುವುದಿಲ್ಲ ಎಂಬ ನಿಲುವನ್ನು ಹೊಂದಿವೆ. ಉಕ್ರೇನ್ ಆಗಿರಲಿ ಅಥವಾ ಪಶ್ಚಿಮ ಏಷ್ಯಾ ಪ್ರದೇಶವಾಗಿರಲಿ, ಸಂಘರ್ಷ ತ್ವರಿತ ಅಂತ್ಯಗೊಳ್ಳಲು ಕೈಗೊಳ್ಳುವ ಎಲ್ಲ ಶಾಂತಿ ಪ್ರಯತ್ನಗಳಿಗೆ ಭಾರತ ಬೆಂಬಲ ನೀಡುವುದನ್ನು ಮುಂದುವರಿಸುತ್ತದೆ ಎಂದು ಮೋದಿ ತಿಳಿಸಿದ್ದಾರೆ.
ಇಬ್ಬರು ನಾಯಕರ ಮಾತುಕತೆಯಲ್ಲಿ ಡಿಜಿಟಲೀಕರಣ ಹಾಗೂ ಸುಸ್ಥಿರ ಅಭಿವೃದ್ಧಿ ಕ್ಷೇತ್ರಗಳಲ್ಲಿ ಭಾರತ–ಫಿನ್ಲ್ಯಾಂಡ್ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯಾಗಿಸಲು ಒಪ್ಪಿಗೆ ವ್ಯಕ್ತವಾಗಿದೆ.



