HomeKarnataka Newsರಾಜ್ಯದಲ್ಲಿ ಮತ್ತೆ ಹಾಲಿನ ದರ ಏರಿಕೆ? ಪ್ರತಿ ಲೀಟರ್ʼಗೆ ₹4-₹5 ಹೆಚ್ಚಳ ಫಿಕ್ಸ್!

ರಾಜ್ಯದಲ್ಲಿ ಮತ್ತೆ ಹಾಲಿನ ದರ ಏರಿಕೆ? ಪ್ರತಿ ಲೀಟರ್ʼಗೆ ₹4-₹5 ಹೆಚ್ಚಳ ಫಿಕ್ಸ್!

For Dai;y Updates Join Our whatsapp Group

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ಗ್ರಾಹಕರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಎದುರಾಗಿದೆ. ನಂದಿನಿ ಹಾಲಿನ ಖರೀದಿ ಮತ್ತು ಮಾರಾಟ ದರ ಹೆಚ್ಚಿಸುವಂತೆ ಹಾಲು ಒಕ್ಕೂಟಗಳು ಸಲ್ಲಿಸಿರುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಪ್ರತಿ ಲೀಟರ್ ಹಾಲಿನ ದರ 4ರಿಂದ 5 ರೂ.ವರೆಗೆ ಹೆಚ್ಚಳವಾಗುವ ಸಾಧ್ಯತೆ ಇದೆ.

ಇತ್ತೀಚೆಗೆ ಹಾಲು ಒಕ್ಕೂಟಗಳ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ನಂದಿನಿ ಹಾಲಿನ ಖರೀದಿ ಹಾಗೂ ಮಾರಾಟ ದರವನ್ನು ಪ್ರತಿ ಲೀಟರ್‌ಗೆ 8ರಿಂದ 10 ರೂ.ವರೆಗೆ ಹೆಚ್ಚಿಸುವಂತೆ ಮನವಿ ಸಲ್ಲಿಸಿತ್ತು.

ರಾಜ್ಯದ 16 ಜಿಲ್ಲೆಗಳ ಹಾಲು ಸಹಕಾರ ಸಂಘಗಳಿಂದ ದರ ಪರಿಷ್ಕರಣೆಗೆ ಬೇಡಿಕೆ ಬಂದಿದ್ದು, ಇದಕ್ಕೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ. ಆದರೆ ಒಕ್ಕೂಟಗಳು ಬೇಡಿಕೆ ಇಟ್ಟಿರುವಷ್ಟು ದರ ಹೆಚ್ಚಿಸುವ ಬದಲು ಪ್ರತಿ ಲೀಟರ್‌ಗೆ 4ರಿಂದ 5 ರೂ.ವರೆಗೆ ಹೆಚ್ಚಳ ಮಾಡುವ ಸಾಧ್ಯತೆ ಇದೆ.

ಶೀಘ್ರದಲ್ಲೇ ಅಧಿಕೃತ ಆದೇಶ?

ಹಾಲಿನ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆಯಿದೆ. ಅಧಿಕೃತ ಆದೇಶ ಪ್ರಕಟವಾದ ಬಳಿಕವೇ ಹಾಲಿನ ದರ ಎಷ್ಟು ಹೆಚ್ಚಳವಾಗಲಿದೆ ಮತ್ತು ಹೊಸ ದರ ಯಾವ ದಿನದಿಂದ ಜಾರಿಗೆ ಬರಲಿದೆ ಎಂಬುದು ಸ್ಪಷ್ಟವಾಗಲಿದೆ.

ದರ ಹೆಚ್ಚಳಕ್ಕೆ ಒಕ್ಕೂಟಗಳ ಕಾರಣವೇನು?

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿದ್ದು, ಮಳೆ ಕೊರತೆಯಿಂದ ಜಾನುವಾರುಗಳಿಗೆ ಅಗತ್ಯವಿರುವ ಹಸಿರು ಮೇವಿನ ಲಭ್ಯತೆ ಕಡಿಮೆಯಾಗಿದೆ. ಇದರ ಜೊತೆಗೆ ಪಶು ಆಹಾರ ತಯಾರಿಕೆಗೆ ಬಳಸುವ ಕಚ್ಚಾ ಸಾಮಗ್ರಿ, ಮೆಕ್ಕೆಜೋಳ ಹಾಗೂ ಇತರ ಆಹಾರ ಪದಾರ್ಥಗಳ ದರ ಶೇ.25ರಷ್ಟು ಹೆಚ್ಚಳವಾಗಿದೆ ಎಂದು ಹಾಲು ಒಕ್ಕೂಟಗಳು ಸರ್ಕಾರದ ಗಮನಕ್ಕೆ ತಂದಿವೆ.

ಜಾನುವಾರುಗಳಿಗೆ ಬಳಸುವ ನೆಲಹಾಸಿನ ವೆಚ್ಚದ ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರವೂ ಹೆಚ್ಚಾಗಿರುವುದರಿಂದ ಹಾಲು ಉತ್ಪಾದನೆಯ ಒಟ್ಟಾರೆ ವೆಚ್ಚ ಏರಿಕೆಯಾಗಿದೆ. ಇದರಿಂದ ಹೈನುಗಾರರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಹಾಲಿನ ಖರೀದಿ ಹಾಗೂ ಮಾರಾಟ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಒಕ್ಕೂಟಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ.

ಇದೀಗ ಸರ್ಕಾರದ ಅಧಿಕೃತ ಆದೇಶದತ್ತ ಹೈನುಗಾರರು ಹಾಗೂ ಗ್ರಾಹಕರ ಗಮನ ನೆಟ್ಟಿದ್ದು, ನಂದಿನಿ ಹಾಲಿನ ಪರಿಷ್ಕೃತ ದರ ಎಷ್ಟಾಗಲಿದೆ ಎಂಬುದು ಆದೇಶ ಹೊರಬಿದ್ದ ಬಳಿಕ ಸ್ಪಷ್ಟವಾಗಲಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img