ಕನಿಷ್ಠ ಬೆಂಬಲ ಬೆಲೆ ಹೆಚ್ಚಳ: ಹರ್ಷ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಮಳೆಗಾಲದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಕೇಂದ್ರ ಸರ್ಕಾರವು ಭತ್ತ, ರಾಗಿ, ಜೋಳ, ಮೆಕ್ಕೆಜೋಳ, ಸಜ್ಜೆ, ತೊಗರಿ, ಉದ್ದು, ಹೆಸರು ಕಾಳು, ಸೋಯಾ, ಎಳ್ಳು, ಹುಚ್ಚೆಳ್ಳು, ಹತ್ತಿ ಸೇರಿದಂತೆ 14 ಬಗೆಯ ಆಹಾರ ಧಾನ್ಯಗಳ ಕನಿಷ್ಠ ಬೆಂಬಲ ಬೆಲೆಯನ್ನು (ಒSP) ಹೆಚ್ಚಿಸುವ ಮೂಲಕ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಗದಗ ಜಿಲ್ಲಾಧ್ಯಕ್ಷ ಸಂತೋಷ ಅಕ್ಕಿ ಹರ್ಷ ವ್ಯಕ್ತಪಡಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಕ್ರಮವು ದೇಶದ ಒಟ್ಟು ವಾರ್ಷಿಕ ಆಹಾರ ಧಾನ್ಯ ಉತ್ಪಾದನೆಯ ಶೇ.50ಕ್ಕಿಂತ ಹೆಚ್ಚು ಪಾಲನ್ನು ಹೊಂದಿರುವ ಬೆಳೆಗಳ ಕೃಷಿಯನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ. ಹೆಚ್ಚಿದ ಕನಿಷ್ಠ ಬೆಂಬಲ ಬೆಲೆಯು ರೈತರು ತಮ್ಮ ಉತ್ಪನ್ನಗಳಿಗೆ ನ್ಯಾಯಯುತ ಬೆಲೆಯನ್ನು ಪಡೆಯುವುದನ್ನು ಖಚಿತಪಡಿಸುತ್ತದೆ. ದೇಶದ ಆಹಾರ ಧಾನ್ಯ ಉತ್ಪಾದಕರ ಆದಾಯವನ್ನು ದ್ವಿಗುಣಗೊಳಿಸುವ ದೃಢನಿಶ್ಚಯದ ಗುರಿಗೆ ಮೀಸಲಾಗಿರುವ ಮೋದಿ ಅವರ ನೇತೃತ್ವದ ಎನ್‌ಡಿಎ ಸರ್ಕಾರವು ಹಿಂದಿನ ವರ್ಷಗಳಿಗಿಂತ ಹೆಚ್ಚಿನ ಬೆಂಬಲ ಬೆಲೆಯನ್ನು ನಿಗದಿಪಡಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here