ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಸಂಪುಟ ದರ್ಜೆ ಸಚಿವ ಬಸವರಾಜ ರಾಯರಡ್ಡಿ ಅವರು ಆಗಸ್ಟ್ 7ರಿಂದ 9ರವರೆಗೆ ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು, ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ.
ಆಗಸ್ಟ್ 7ರಂದು ಬೆಳಿಗ್ಗೆ 10.30ಕ್ಕೆ ಗದಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿರುವ ಸಚಿವರು, ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ರೈತರೊಂದಿಗೆ ಬರಪೀಡಿತ ಪ್ರದೇಶಗಳ ವೀಕ್ಷಣೆ ನಡೆಸಿ, ಬಳಿಕ ಮುಂಡರಗಿ ತಾಲೂಕಿನಲ್ಲಿ ಅಧಿಕಾರಿಗಳು ಹಾಗೂ ರೈತರೊಂದಿಗೆ ಸಭೆ ನಡೆಸಿ ಬರಪೀಡಿತ ಪ್ರದೇಶಗಳನ್ನು ಪರಿಶೀಲಿಸಲಿದ್ದಾರೆ.
ಆಗಸ್ಟ್ 8ರಂದು ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರೈತರೊಂದಿಗೆ ಬರಪೀಡಿತ ಪ್ರದೇಶಗಳ ವೀಕ್ಷಣೆ ನಡೆಸಲಿದ್ದಾರೆ. ಬಳಿಕ ರೋಣ ಹಾಗೂ ಗಜೇಂದ್ರಗಡ ತಾಲೂಕುಗಳಲ್ಲಿಯೂ ಇದೇ ರೀತಿಯ ಸಭೆ ಹಾಗೂ ಸ್ಥಳ ಪರಿಶೀಲನೆ ನಡೆಸಿ ಧಾರವಾಡದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಆಗಸ್ಟ್ 9ರಂದು ನರಗುಂದ ತಾಲೂಕಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರೈತರೊಂದಿಗೆ ಬರಪೀಡಿತ ಪ್ರದೇಶಗಳ ವೀಕ್ಷಣೆ ನಡೆಸಲಿದ್ದಾರೆ.
ಸಚಿವರ ಪ್ರವಾಸದ ಸಂದರ್ಭದಲ್ಲಿ ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹಾರ, ಸನ್ಮಾನ ಸೇರಿದಂತೆ ಯಾವುದೇ ಗೌರವ ಸಮಾರಂಭಗಳನ್ನು ಆಯೋಜಿಸಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.



