ಬೆಟಗೇರಿ ಈದಗಾ ಕಮಿಟಿ ವತಿಯಿಂದ ಸೋಮವಾರ ನಡೆದ ಪ್ರವಾದಿ ಮುಹಮ್ಮದ ಪೈಗಂಬರ್ ಜಯಂತಿ ಕಾರ್ಯಕ್ರಮದಲ್ಲಿ ಮುಸ್ಲಿಂ ಧರ್ಮೀಯರ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಶ್ರೀ ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಬೆಟಗೇರಿ ಈದಗಾ ಕಮಿಟಿಯ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷರಾದ ಪೀರಸಾಬ ಕೌತಾಳ ಉಪಸ್ಥಿತರಿದ್ದರು.