ಬೆಂಗಳೂರು: ನಾವು ಪೂಜನೀಯ ಭಾವದಿಂದ ಸ್ವಾಮೀಜಿಯವರ ಕಾಲಿಗೆ ಬೀಳುತ್ತೇವೆ. ಆದರೆ, ಅಂಥವರೇ ಯುವಕರ ಕೈಯಲ್ಲಿ ತಲ್ವಾರ್ ಕೊಡಿ ಎಂಬುದು ಸರಿಯಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮರುಳಾರಾಧ್ಯ ಶ್ರೀಗಳು ಮಕ್ಕಳ ಕೈಗೆ ಪೆನ್ ಬದಲು ತಲ್ವಾರ್ ಕೊಡಿ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,
Advertisement
ಮರುಳಾರಾಧ್ಯ ಶಿವಾಚಾರ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮಕ್ಕಳ ಕೈಯಲ್ಲಿ ಪೆನ್ ಬದಲು ತಲ್ವಾರ್ ಕೊಡಿ ಅಂತಾರೆ. ಯಾವ ಸೆಕ್ಷನ್‌ನಡಿ ಕ್ರಮ ತೆಗೆದುಕೊಳ್ಳಬೇಕೆಂದು ನೋಡೋಣ. ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ತಾರೆ ಎಂದರು.
ಧರ್ಮಗುರುಗಳು ಧರ್ಮದಿಂದ ನಡೆದುಕೊಳ್ಳಬೇಕು. ಧರ್ಮ ಪ್ರಚಾರಕರಾಗಿ ಪ್ರಚೋದನೆ ನೀಡಬಾರದು. ನಾವುಗಳು ಪೂಜ್ಯನೀಯ ದೃಷ್ಟಿಯಿಂದ ನೋಡ್ತೇವೆ. ಸ್ವಾಮೀಜಿಗಳ ಕಾಲಿಗೆ ಬೀಳ್ತೇವೆ. ಅವರು ತಲ್ವಾರ್ ಕೊಡಿ ಅಂದರೆ ಸರಿಯಲ್ಲ. ಸ್ವಾಮಿಗಳು ಯಾರೂ ಪ್ರಚೋದನೆಯ ಹೇಳಿಕೆ ನೀಡಬಾರದು ಎಂದು ತಿಳಿಸಿದರು.