ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸುವ ಎಲ್‌ಇಡಿ ಪರದೆ ಅಳವಡಿಸಿರುವ ಸಂಚಾರಿ ಜಾಗೃತಿ ವಾಹನಕ್ಕೆ ಬಿಂಕದಕಟ್ಟಿಯಲ್ಲಿ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಚಾಲನೆ ನೀಡಿದರು.
ರಾಜ್ಯ ಸರಕಾರವು ಸಾಮಾನ್ಯ ಜನರ ಜೀವನಮಟ್ಟ ಸುಧಾರಣೆಗಾಗಿ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಶಕ್ತಿ ಯೋಜನೆ, ಯುವನಿಧಿ, ಗೃಹಜ್ಯೋತಿ, ಅನ್ನಭಾಗ್ಯ ಬಗ್ಗೆ ಎಲ್‌ಇಡಿ ವಾಹನ ಹಾಗೂ ಬೀದಿ ನಾಟಕ ತಂಡಗಳ ಮೂಲಕ ಜಾಗೃತಿ ಮೂಡಿಸುತ್ತಿದೆ. ಸರ್ಕಾರದ ಯೋಜನೆಗಳ ಲಾಭ ನೇರವಾಗಿ ಜನರಿಗೆ ತಲುಪಬೇಕೆಂಬ ಉದ್ದೇಶದಿಂದ ಎಲ್‌ಇಡಿ ಪರದೆ ಅಳವಡಿಸಿರುವ ವಾಹನದ ಮೂಲಕ ಅರಿವು ಮೂಡಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆಯುವಂತೆ ಕೋರಲಾಗಿದೆ.
ಈ ವಾಹನಗಳು ಜಿಲ್ಲೆಯ ಗದಗ ತಾಲೂಕಿನ ಗ್ರಾಮಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಿದೆ. ಬೀದಿ ನಾಟಕ ತಂಡಗಳು, ದಿನಕ್ಕೆ 2 ರಂತೆ ಬೀದಿ ನಾಟಕಗಳ ಮೂಲಕ ಅರಿವು ಮೂಡಿಸಲಿವೆ. ಈ ಸಂದರ್ಭದಲ್ಲಿ ಪ್ರಮುಖರಾದ ಆನಂದಸ್ವಾಮಿ ಗಡ್ಡದೇವರಮಠ, ರವಿ ಮೂಲಿಮನಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಡಾ. ಶರಣು ಗೊಗೇರಿ, ಕೊಟ್ರೇಶ್ ವಿಭೂತಿ, ಕಲಾವಿದರಾದ ವೀರಣ್ಣ ಅಂಗಡಿ ಮುಂತಾದವರು ಉಪಸ್ಥಿತರಿದ್ದರು.



