ನಗರದ ಕೃಷಿ ಉತ್ಪನ್ನ ಸಮಿತಿಯ ಮುಖ್ಯರಸ್ತೆ, ಚರಂಡಿ, ವಿದ್ಯುದೀಕರಣ ಸೌಕರ್ಯಗಳನ್ನು ಆರ್‌ಐಡಿಎಫ್-29 ಯೋಜನೆಯಡಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸದ ಬಸವರಾಜ ಬೊಮ್ಮಾಯಿ, ವಿ.ಪ ಸದಸ್ಯ ಎಸ್.ವಿ. ಸಂಕನೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೊಜನೆಗಳ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕಾಧ್ಯಕ್ಷ ಅಶೋಕ ಮಂದಾಲಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.