ವಿಜಯಸಾಕ್ಷಿ ಸುದ್ದಿ, ಗದಗ: 2022-23ನೇ ಸಾಲಿನ ವಿಶೇಷ ಅನುದಾನ ಶಾಲಾ ಕೊಠಡಿ ಯೋಜನೆಯಡಿಯಲ್ಲಿ ಅಂದಾಜು ಮೊತ್ತ 41.70 ಲಕ್ಷ ರೂಗಳಲ್ಲಿ ನಿರ್ಮಿಸಲಾದ ಮುಳಗುಂದದ ದಾವಲಮಲೀಕ್ ಪಹಾಡದ ಸರಕಾರಿ ಕಿರಿಯ ಪ್ರಾಥಮಿಕ ಉರ್ದು ಶಾಲೆಯ ನೂತನ 4 ಕೊಠಡಿಗಳ ಕಟ್ಟಡವನ್ನು ಶನಿವಾರ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಉದ್ಘಾಟಿಸಿದರು.
Advertisement
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ತಹಸೀಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ, ಶಾಲಾ ಶಿಕ್ಷಕ ವೃಂದದವರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಹಾಜರಿದ್ದರು.