ವಿಜಯಸಾಕ್ಷಿ ಸುದ್ದಿ, ಗದಗ: ಗದಗ ತಾಲೂಕಿನ ಬಿಂಕದಕಟ್ಟಿಯಲ್ಲಿ ನಿರ್ಮಾಣಗೊಂಡಿರುವ ನೂತನ ಗ್ರಾಮ ಪಂಚಾಯಿತಿ ಕಟ್ಟಡವನ್ನು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ರವಿವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಗ್ರಾ.ಪಂ ಅಧ್ಯಕ್ಷರುಗಳು, ಸದಸ್ಯರುಗಳು, ಗಣ್ಯರು, ಜಿಲ್ಲಾ ಪಂಚಾಯಿತಿ ಸಿ.ಇ.ಓ ಭರತ ಎಸ್ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.



