ವಿಜಯಸಾಕ್ಷಿ ಸುದ್ದಿ, ಗದಗ: ಪಶು ಸಂಪತ್ತನ್ನು ಅಧಿಕಗೊಳಿಸಿ ಅದರಿಂದ ಆರ್ಥಿಕ ಸ್ವಾವಲಂಬಿಗಳಾಗಲು ಪಶು ಆಸ್ಪತ್ರೆ ಸಹಕಾರಿಯಾಗಲಿದೆ. ಈ ಭಾಗದ ಸಾರ್ವಜನಿಕರು ಹೆಚ್ಚು ಹೆಚ್ಚು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕಾನೂನು, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ತಿಳಿಸಿದರು.
ಜಿಲ್ಲಾ ಪಂಚಾಯಿತಿ, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆ ಬೆಟಿಗೇರಿ ಸಂಸ್ಥೆಯಲ್ಲಿ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಬೆಂಗಳೂರು ಕೆಎಂಎಫ್‌ನಲ್ಲಿ ಹೆಚ್ಚು ಹಾಲು ಉತ್ಪಾದನೆಯಾಗುತ್ತದೆ. ನಮ್ಮ ಗದಗ-ಬೆಟಗೇರಿಯಲ್ಲಿ ನೂತನ ಕಟ್ಟಡದ ಭೂಮಿಪೂಜೆಯಾಗಿರುವುದು ರೈತರಿಗೆ ಭರವಸೆ ಮೂಡಿಸಿದೆ. ಪಶುಪಾಲನೆಯಲ್ಲಿ ಮತ್ತು ಹಾಲು ಉತ್ಪಾದನೆಯನ್ನು ಹೆಚ್ಚಿಸಲು ಸರ್ಕಾರದಿಂದ ಸಹಾಯ-ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಮುಖ್ಯ ಅತಿಥಿಗಳಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್‌ಸಾಬ ಬಬರ್ಚಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಲಕ್ಷ್ಮವ್ವ ಭಜಂತ್ರಿ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಡಾ. ಎಚ್.ಬಿ. ಹುಲಗನ್ನವರ, ಡಾ. ಎಚ್.ವೈ. ಹೊನ್ನಿ ನಾಯ್ಕರ್, ಡಾ. ಹೀರಲಾಲ ಎನ್.ಜನಗಿ ಉಪಸ್ಥಿತರಿದ್ದರು.