ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಅವರು ಮೇ. 10ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಮೇ 10ರಂದು ಬೆಳಿಗ್ಗೆ 6 ಗಂಟೆಗೆ ಹುಬ್ಬಳ್ಳಿಯಿಂದ ರಸ್ತೆ ಮೂಲಕ ಹೊರಟು ಬೆಳಿಗ್ಗೆ 6.30 ಗಂಟೆಗೆ ಗದುಗಿಗೆ ಆಗಮಿಸುವರು. ಬೆಳಿಗ್ಗೆ 10 ಗಂಟೆಗೆ ನಗರದ ಕೆ.ಎಚ್. ಪಾಟೀಲ ಸ್ಟೇಡಿಯಂ ಹತ್ತಿರ ವಿದ್ಯಾನಗರದ ಮಂಗಳಾ ಬಚಪನ್ ಪ್ಲೇಸ್ಕೂಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆಳಿಗ್ಗೆ 11 ಗಂಟೆಗೆ ನಗರದ ಶಿವಾನಂದ ಕಲ್ಯಾಣ ಮಂಟಪದಲ್ಲಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1 ಗಂಟೆಗೆ ರಸ್ತೆ ಮೂಲಕ ಬನಶಂಕರಿಗೆ ಪ್ರಯಾಣ ಮಾಡುವರು. ಮಧ್ಯಾಹ್ನ 3 ಗಂಟೆಗೆ ಬನಶಂಕರಿಯಿಂದ ಗದುಗಿಗೆ ಆಗಮಿಸಿ ವಾಸ್ತವ್ಯ ಮಾಡುವರು ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.