HomeKarnataka Newsರಾತ್ರಿ 2 ಗಂಟೆಗೆ ಚನ್ನಪಟ್ಟಣ ಆಸ್ಪತ್ರೆಗೆ ಸಚಿವ ಖಾದರ್ ಭೇಟಿ: ಸಿಬ್ಬಂದಿಗೆ ತರಾಟೆ

ರಾತ್ರಿ 2 ಗಂಟೆಗೆ ಚನ್ನಪಟ್ಟಣ ಆಸ್ಪತ್ರೆಗೆ ಸಚಿವ ಖಾದರ್ ಭೇಟಿ: ಸಿಬ್ಬಂದಿಗೆ ತರಾಟೆ

For Dai;y Updates Join Our whatsapp Group

ರಾಮನಗರ: ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಮಧ್ಯರಾತ್ರಿ ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಖಾಸಗಿ ಕಾರ್ಯಕ್ರಮದ ನಿಮಿತ್ತ ತಡರಾತ್ರಿ ಚನ್ನಪಟ್ಟಣಕ್ಕೆ ಆಗಮಿಸಿದ್ದ ಸಚಿವರು, ರಾತ್ರಿ ಸುಮಾರು 2 ಗಂಟೆಗೆ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಜನರಲ್ ವಾರ್ಡ್, ಐಸಿಯು ಹಾಗೂ ಶೌಚಾಲಯಗಳನ್ನು ಪರಿಶೀಲಿಸಿದರು.

ಈ ವೇಳೆ ಆಸ್ಪತ್ರೆಯ ಸಿಬ್ಬಂದಿ ಹಾಜರಾತಿ ಪರಿಶೀಲಿಸಿದ ಸಚಿವರು, ವೈದ್ಯರಿಂದ ಆಸ್ಪತ್ರೆಯಲ್ಲಿನ ಚಿಕಿತ್ಸಾ ವ್ಯವಸ್ಥೆ ಹಾಗೂ ರೋಗಿಗಳಿಗೆ ನೀಡುತ್ತಿರುವ ಸೇವೆಗಳ ಕುರಿತು ಮಾಹಿತಿ ಪಡೆದರು.

ಆಸ್ಪತ್ರೆಯಲ್ಲಿ ಅಗತ್ಯ ಔಷಧಗಳು ಲಭ್ಯವಿದ್ದರೂ, ಹೊರಗಿನ ಮೆಡಿಕಲ್‌ಗಳಿಗೆ ಔಷಧಿ ಬರೆದುಕೊಡುತ್ತಿರುವ ವಿಚಾರ ಸಚಿವರ ಗಮನಕ್ಕೆ ಬಂದಿದೆ. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಆಸ್ಪತ್ರೆಯಲ್ಲಿ ಸೌಲಭ್ಯಗಳಿದ್ದರೂ ಹೊರಗಿನಿಂದ ಔಷಧಿ ಖರೀದಿಸುವಂತೆ ರೋಗಿಗಳಿಗೆ ಏಕೆ ಸೂಚಿಸುತ್ತೀರಿ ಎಂದು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಆಸ್ಪತ್ರೆಯಲ್ಲಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸೂಕ್ತ ಚಿಕಿತ್ಸೆ ನೀಡುವಂತೆ ಸಚಿವರು ಸಿಬ್ಬಂದಿಗೆ ಸೂಚಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img