• About
  • Advertise
  • Privacy & Policy
  • Contact
Saturday, November 21, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಸಚಿವ ಖಂಡ್ರೆ–ಶಾಸಕ ಲಮಾಣಿ ನಡುವೆ ಜಟಾಪಟಿ

Vijaya Sakshi News Desk by Vijaya Sakshi News Desk
November 21, 2026
in Gadag News
0
SHARES
0
VIEWS
Share on Facebook

ಅಧಿಕಾರಿಗಳು ತಪ್ಪು ಮಾಹಿತಿ ನೀಡುತ್ತಿದ್ದಾರೆಂದು ಶಾಸಕ ಡಾ. ಚಂದ್ರು ಲಮಾಣಿ ಆರೋಪ: ಲಿಖಿತ ದೂರು ನೀಡುವಂತೆ ಸಚಿವರ ಸೂಚನೆ

ಗದಗ: ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆ ಕುರಿತು ನಡೆದ ಚರ್ಚೆ ಸಚಿವ ಈಶ್ವರ ಖಂಡ್ರೆ ಹಾಗೂ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ನಡುವಿನ ಜಟಾಪಟಿಗೆ ಕಾರಣವಾಯಿತು. ಅಧಿಕಾರಿಗಳು ಕ್ಷೇತ್ರದ ವಾಸ್ತವ ಸ್ಥಿತಿಯನ್ನು ಮರೆಮಾಚಿ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಶಾಸಕರು ಆರೋಪಿಸಿದರೆ, ಸಮಸ್ಯೆಗಳಿದ್ದರೆ ಲಿಖಿತ ದೂರು ಸಲ್ಲಿಸುವಂತೆ ಸಚಿವರು ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ನಡೆದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಘಟನೆ ನಡೆಯಿತು.

ಗ್ರಾಮೀಣ ಭಾಗದ ಕುಡಿಯುವ ನೀರು ಪೂರೈಕೆ, ಅಭಿವೃದ್ಧಿ ಕಾಮಗಾರಿಗಳು ಹಾಗೂ ವಿಬಿಜಿ–ರಾಮ್ ಜಿ ಯೋಜನೆಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದ ವೇಳೆ ಶಾಸಕ ಡಾ. ಚಂದ್ರು ಲಮಾಣಿ, ತಮ್ಮ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆಯನ್ನು ಪ್ರಸ್ತಾಪಿಸಿ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಶಿರಹಟ್ಟಿ ಮತಕ್ಷೇತ್ರದ 37 ಗ್ರಾಮಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಶಿರಹಟ್ಟಿ, ಲಕ್ಷ್ಮೇಶ್ವರ ಹಾಗೂ ಮುಂಡರಗಿ ತಾಲೂಕುಗಳ ಹಲವು ಗ್ರಾಮಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಆದರೆ, ಅಧಿಕಾರಿಗಳು ವಾಸ್ತವ ಸ್ಥಿತಿಯನ್ನು ಮರೆಮಾಚಿ ಸಚಿವರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳ ಪರವಾಗಿ ಸಚಿವರು ಮಾತನಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕರು, ಸಭೆಗೆ ಆಹ್ವಾನಿಸಿದ ಬಳಿಕ ಕ್ಷೇತ್ರದ ಸಮಸ್ಯೆಗಳನ್ನು ಪ್ರಸ್ತಾಪಿಸಲು ಅವಕಾಶ ನೀಡಬೇಕು. ಅಧಿಕಾರಿಗಳು ತಪ್ಪು ಮಾಹಿತಿ ನೀಡುತ್ತಿದ್ದರೂ ಅವರ ಮಾತಿಗೇ ಆದ್ಯತೆ ನೀಡಲಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಈಶ್ವರ ಖಂಡ್ರೆ, ಇದು ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಾಗಿದ್ದು, ಸಮಸ್ಯೆಗಳಿದ್ದರೆ ಸಂಬಂಧಿಸಿದ ಅಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಬೇಕು. ಕೆಡಿಪಿ ಸಭೆಯಲ್ಲಿಯೂ ಈ ವಿಚಾರವನ್ನು ಪ್ರಸ್ತಾಪಿಸಬಹುದು. ಲಿಖಿತ ದೂರು ನೀಡಿದರೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕುಡಿಯುವ ನೀರಿನ ಸಮಸ್ಯೆ ಕುರಿತು ವಿಸ್ತೃತ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸುವುದಾಗಿಯೂ ಹೇಳಿದ ಸಚಿವರು, ಅಧಿಕಾರಿಗಳ ಪ್ರಗತಿ ಪರಿಶೀಲನೆ ನಡೆಸಲು ತಾನು ಬಂದಿದ್ದು, ಸಮಸ್ಯೆಗಳನ್ನು ಬಗೆಹರಿಸುವುದಾಗಿ ಈಗಾಗಲೇ ತಿಳಿಸಿರುವುದಾಗಿ ಸ್ಪಷ್ಟಪಡಿಸಿದರು.

ಈ ವಿಚಾರವಾಗಿ ಸಚಿವ ಈಶ್ವರ ಖಂಡ್ರೆ ಹಾಗೂ ಶಾಸಕ ಡಾ. ಚಂದ್ರು ಲಮಾಣಿ ನಡುವೆ ಕೆಲಕಾಲ ವಾಗ್ವಾದ ನಡೆಯಿತು.

Tags: District Review MeetingDr Chandru Lamanidrinking water problemEshwar Khandregadag newsGadag Politicskarnataka newsLakshmeshwar NewsMundargi NewsRural Water Supplyshirahatti newsVijayasakshi
ShareSendShare
Previous Post

KPSC ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಬಿ.ವಿ. ಗೀತಾಗೆ ನ್ಯಾಯಾಂಗ ಬಂಧನ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0

ಸಚಿವ ಖಂಡ್ರೆ–ಶಾಸಕ ಲಮಾಣಿ ನಡುವೆ ಜಟಾಪಟಿ

November 21, 2026
KPSC ಅಕ್ರಮ ಪ್ರಕರಣ: ಸದಸ್ಯೆ ಬಿ.ವಿ. ಗೀತಾ ಮನೆ ಮೇಲೆ SIT ದಾಳಿ, ದಾಖಲೆಗಳ ಪರಿಶೀಲನೆ

KPSC ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಬಿ.ವಿ. ಗೀತಾಗೆ ನ್ಯಾಯಾಂಗ ಬಂಧನ

November 21, 2026

ಗ್ರಾಮೀಣ ಅಭಿವೃದ್ಧಿಗೆ 250 ಕೋಟಿ ರೂ. ಅನುದಾನ: ಹದಗೆಟ್ಟ ರಸ್ತೆ, ಸಿಸಿ ರಸ್ತೆ, ಚರಂಡಿ ಅಭಿವೃದ್ಧಿಗೆ ಆದ್ಯತೆ; 15 ತಿಂಗಳಲ್ಲಿ ಕಾಮಗಾರಿ ಪೂರ್ಣ!

November 21, 2026
ಆಶಾ ಕಾರ್ಯಕರ್ತೆಯರ ಪ್ರತಿಭಟನೆ 5ನೇ ದಿನಕ್ಕೆ: ಹೋರಾಟ ಕೈಬಿಡುವಂತೆ ಡಿ.ಕೆ. ಶಿವಕುಮಾರ್ ಭಾವನಾತ್ಮಕ ಮನವಿ!

ಆಶಾ ಕಾರ್ಯಕರ್ತೆಯರ ಪ್ರತಿಭಟನೆ 5ನೇ ದಿನಕ್ಕೆ: ಹೋರಾಟ ಕೈಬಿಡುವಂತೆ ಡಿ.ಕೆ. ಶಿವಕುಮಾರ್ ಭಾವನಾತ್ಮಕ ಮನವಿ!

November 21, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಸಚಿವ ಖಂಡ್ರೆ–ಶಾಸಕ ಲಮಾಣಿ ನಡುವೆ ಜಟಾಪಟಿ

November 21, 2026
KPSC ಅಕ್ರಮ ಪ್ರಕರಣ: ಸದಸ್ಯೆ ಬಿ.ವಿ. ಗೀತಾ ಮನೆ ಮೇಲೆ SIT ದಾಳಿ, ದಾಖಲೆಗಳ ಪರಿಶೀಲನೆ

KPSC ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಬಿ.ವಿ. ಗೀತಾಗೆ ನ್ಯಾಯಾಂಗ ಬಂಧನ

November 21, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper