ಬೆಂಗಳೂರು: ಸಹಕಾರಿ ಸಚಿವ ರಾಜಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹೈಕಮಾಂಡ್ ಸೂಚನೆಯ ಹಿನ್ನೆಲೆ ಅವರು ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.
ಇದಕ್ಕೂ ಮೊದಲು, “ಸೆಪ್ಟೆಂಬರ್ ಕ್ರಾಂತಿ” ಹೇಳಿಕೆ ನೀಡಿ ರಾಜಣ್ಣ ಸಂಚಲನ ಮೂಡಿಸಿದ್ದರು. ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡಿದ ನಂತರ, ನಮ್ಮ ಅವಧಿಯಲ್ಲಿ ಮತಪಟ್ಟಿ ಸಿದ್ಧವಾಗಿತ್ತು ಎಂದು ಅವರು ಹೇಳಿದ್ದರು.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ, ಆಗ ಎಲ್ಲರು ಕಣ್ಣುಮುಚ್ಚಿ ಕುಳಿತಿದ್ದರೇ ಎಂದು ರಾಜಣ್ಣ ಪ್ರಶ್ನಿಸಿದ್ದರು. ಅವರ ಈ ಹೇಳಿಕೆ ಕಾಂಗ್ರೆಸ್ಗೆ ಮುಜುಗರ ತಂದಿತ್ತು. ನಂತರ, ಹೈಕಮಾಂಡ್ ಅವರು ರಾಜೀನಾಮೆ ನೀಡುವಂತೆ ಸೂಚಿಸಿತ್ತು.



