ಬೀದರ್: ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ, ಹಣಕ್ಕೆ ಬೇಡಿಕೆ ಹಿನ್ನೆಲೆ ಗುತ್ತಿಗೆದಾರ ರೈಲ್ವೆ ಟ್ರ್ಯಾಕ್‌ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದಲ್ಲಿ ನಡೆದಿದೆ. ಸಚಿನ್ (26) ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರನಾಗಿದ್ದು,
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದವರಾಗಿರುವ ಮೃತ ಸಚಿನ್. ಏಳುಪುಟಗಳ ಸಮಗ್ರವಾದ ಡೆಟ್ ನೋಟ್ ಬರೆದಿದ್ದು ಪ್ರಿಯಾಂಕ್ ಖರ್ಗೆ ಆಪ್ತ, ಕಲಬುರಗಿಯ ಮಾಜಿ ಕಾರ್ಪೊರೇಟರ್ ರಾಜು ಕಪನೂರು, ನಂದಕುಮಾರ್ ನಾಗಭುಜಂಗೆ, ಗೋರಖನಾಥ್ ಸೇರಿ 6 ಜನರ ಮೇಲೆ ಗಂಭೀರ ಆರೋಪ ಕೇಳಿಬಂದಿದೆ.
ಪ್ರಿಯಾಂಕ್ ಖರ್ಗೆ ಆಪ್ತನಾಗಿರುವ ರಾಜು ಕಪನೂರು ಟೆಂಡರ್ ಕೊಡುವ ವಿಚಾರಕ್ಕೆ ಗುತ್ತಿಗೆದಾರ ಸಚಿನ್‌ನಿಂದ ಸುಮಾರು 15 ಲಕ್ಷ ರೂಪಾಯಿಗೂ ಅಧಿಕ ಹಣ ಪಡೆದು ಟೆಂಡರ್ ನೀಡದೇ ವಂಚನೆ ಮಾಡಿದ್ದಲ್ಲದೇ ಬಳಿಕ ಮತ್ತೂ 1 ಕೋಟಿ ರೂ.ಹಣಕ್ಕೆ ಬೇಡಿಕೆ ಇಡಲಾಗಿದೆ, 1 ಕೋಟಿ ರೂಪಾಯಿ ಕೊಡದಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಆರೋಪಿಸಲಾಗಿದೆ. ಈ ಘಟನೆ ಸಂಬಂಧ ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.