ಬೆಂಗಳೂರು, ಡಿ,08- ಅನಾರೋಗ್ಯದಿಂದ ಬಳಲುತ್ತಿದ್ದ ದಕ್ಷಿಣ ಭಾರತದ ಹೆಸರಾಂತ ಚಿತ್ರ ನಟಿ ಲೀಲಾವತಿ ಅವರ ನಿಧನಕ್ಕೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ಆರ್ ಪಾಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು ೬೦೦ ಚಿತ್ರಗಳಲ್ಲಿ ನಟಿಸಿದ್ದ ಅವರ ನಿಧನದಿಂದ ಕನ್ನಡ ಮಾತ್ರವಲ್ಲದೆ, ಭಾರತದ ಚಿತ್ರರಂಗಕ್ಕೂ ತುಂಬಲಾರದ ನಷ್ಟ ಎಂದು ಕಂಬನಿ ಮಿಡಿದಿದ್ದಾರೆ. ಹಿರಿಯ ನಟಿಯನ್ನು ಉಳಿಸಿಕೊಳ್ಳುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ವತಿಯಿಂದಲೇ ಚಿಕಿತ್ಸೆ ಕೊಡಿಸುವುದಾಗಿ ಹೇಳಿದ್ದರು. ಆದರೆ, ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ಈಡೇರಲಿಲ್ಲ ಎಂದು ವಿಷಾದಿಸಿದ್ದಾರೆ.



