HomeBengaluru Newsಹಣ ದುರ್ಬಳಕೆ: ತಲೆಮರೆಸಿಕೊಂಡ ಬಿಡದಿ ಇನ್ಸ್‌ಪೆಕ್ಟರ್, CCB ಶೋಧ ಕಾರ್ಯ!

ಹಣ ದುರ್ಬಳಕೆ: ತಲೆಮರೆಸಿಕೊಂಡ ಬಿಡದಿ ಇನ್ಸ್‌ಪೆಕ್ಟರ್, CCB ಶೋಧ ಕಾರ್ಯ!

For Dai;y Updates Join Our whatsapp Group

Spread the love

ಬೆಂಗಳೂರು:- ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿ ಬಿಡದಿ ಠಾಣೆಯ ಇನ್ಸ್‌ಪೆಕ್ಟರ್ ಶಂಕರ್ ನಾಯ್ಕ್ ವಿರುದ್ಧದ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಲಾಗಿದೆ.

ಸದ್ಯ ಸಿಸಿಬಿ ತಂಡದಿಂದ ಇನ್ಸ್‌ಪೆಕ್ಟರ್ ಶಂಕರ್ ನಾಯ್ಕ್ ಗೆ ತೀವ್ರ ಶೋಧ ನಡೆಯುತ್ತಿದೆ. ಸದ್ಯ ಹೈಕೋರ್ಟ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದೆ.

ತಡೆಯಾಜ್ಞೆ ತೆರವು ಹಿನ್ನೆಲೆ ಇನ್ಸ್‌ಪೆಕ್ಟರ್ ಶಂಕರ್ ನಾಯ್ಕ್ ಗಾಗಿ ಸಿಸಿಬಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಆದರೆ ಬಂಧನ ಭೀತಿಯಿಂದ ಶಂಕರ್ ನಾಯ್ಕ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾರೆ.

2022ರಲ್ಲಿ ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಇನ್ಸ್‌ಪೆಕ್ಟರ್ ಶಂಕರ್ ನಾಯ್ಕ್ ಅವರು ಕಳ್ಳತನ ಪ್ರಕರಣದಲ್ಲಿ ಉದ್ಯಮಿ ಹರೀಶ್ ಎಂಬುವರ ಕಾರು ಚಾಲಕ ಸಂತೋಷ್‌ನನ್ನು ಬಂಧಿಸಿ ₹72 ಲಕ್ಷವನ್ನು ಜಪ್ತಿ ಮಾಡಿದ್ದರು.

ಆದರೆ ಈ ಹಣವನ್ನು ಠಾಣೆಯ ಸುಪರ್ದಿಗೆ ಕೊಡದೆ ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಣ ಸಂಬಂಧ ಹಿರಿಯ ಅಧಿಕಾರಿಗಳು ನೋಟಿಸ್ ನೀಡಿದ ಬಳಿಕ ಚೀಲದಲ್ಲಿ ಹಣವನ್ನು ತುಂಬಿ ಠಾಣೆಗೆ ತಂದಿಟ್ಟು ಶಂಕರ್ ನಾಯ್ಕ್ ತೆರಳಿದ್ದರು.

ಕೊನೆಗೆ ಬ್ಯಾಟರಾಯನಪುರ ಠಾಣೆಯಲ್ಲಿ ಶಂಕರ್ ಹಾಗೂ ಮಧ್ಯವರ್ತಿ ಲೋಕನಾಥ್ ವಿರುದ್ಧ ಕೆಂಗೇರಿ ಗೇಟ್ ಉಪ ವಿಭಾಗದ ಎಸಿಪಿ ಭರತ್ ರೆಡ್ಡಿ ದೂರು ಆಧರಿಸಿ ಎಫ್‌ಐಆರ್ ದಾಖಲಾಯಿತು. 2023ರ ನವೆಂಬರ್ ನಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದರು.

ಈ ಬಗ್ಗೆ ತನಿಖೆಗಿಳಿದ ಸಿಸಿಬಿ ಪೊಲೀಸರು, ಮಧ್ಯವರ್ತಿ ಲೋಕನಾಥ್ ಸಿಂಗ್‌ನನ್ನು ಬುಧವಾರ ರಾತ್ರಿ ಬಂಧಿಸಿದ್ದರು. ಬಳಿಕ ಪ್ರಕರಣ ರದ್ದು ಕೋರಿ ಶಂಕರ್ ನಾಯ್ಕ್ ಹೈಕೋರ್ಟ್ ಮೆಟ್ಟಲೇರಿದ್ದರು.

ಆಗ ಹೈಕೋರ್ಟ್ ಪ್ರಕರಣದ ತನಿಖೆಗೆ ತಡೆ ನೀಡಿತ್ತು. ಆದರೆ ತಡೆಯಾಜ್ಞೆ ತೆರವುಗೊಳಿಸುವಂತೆ ಸಿಸಿಬಿ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆ ಹೈಕೋರ್ಟ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದೆ.

ಹೀಗಾಗಿ ಬಂಧನ ಭೀತಿಯಲ್ಲಿ ಅವರು ಎಸ್ಕೇಪ್ ಆಗಿದ್ದು CCB ಪೊಲೀಸರಿಂದ ತನಿಖೆ ಮುಂದುವರಿದಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!