ಬೆಳಗಾವಿ: ತಡರಾತ್ರಿ ಕಿಡಿಗೇಡಿಗಳಿಂದ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಬೆಂಕಿ ಹಚ್ಚಿರುವ ಘಟನೆ ತಾಲೂಕಿನ ಕಲಕಾಂಬ ಗ್ರಾಮದಲ್ಲಿ ಜರುಗಿದೆ. ತಡರಾತ್ರಿ ಆಗಮಿಸಿದ್ದ ಕಿಡಿಗೇಡಿಗಳು ಬಿಯರ್ ಬಾಟಲ್‌ನಲ್ಲಿ ಪೆಟ್ರೋಲ್ ಸುರಿದು ಬಟ್ಟೆ ಹಾಕಿ ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾರೆ. ಅಲ್ಲದೇ, ಗ್ರಾಮ ಪಂಚಾಯಿತಿ ಆವರಣ ಹಾಗೂ ಒಳಗಡೆ ಬಿಯರ್ ಬಾಟಲ್‌ಗಳನ್ನು ಎಸೆಯಲಾಗಿದೆ.
Advertisement
ಕೃತ್ಯ ಎಸಗಿ ಸಿಕ್ಕಿಬಿಳುತ್ತೇವೆ ಎಂದು ಗ್ರಾಪಂ ಕಟ್ಟಡದ ಸಿಸಿಟಿವಿ ಕ್ಯಾಮೆರಾ ತೆಗೆದುಕೊಂಡು ಹೋಗಿದ್ದಾರೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಗೆ ಗಲಾಟೆಯೇ ಕಾರಣ ಎಂದು ಹೇಳಲಾಗುತ್ತಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.