ಶ್ರೀ ಕೆಂಪಮ್ಮ ದೇವಿ ದೇವಾಲಯಕ್ಕೆ ವಾಮಾಚಾರ ಮಾಡಿ ಬಾಗಿಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..!

0
Spread the love

ತುಮಕೂರು: ದೇವಾಲಯಕ್ಕೆ ವಾಮಾಚಾರ ಮಾಡಿ ಕಿಡಿಗೇಡಿಗಳು ಬಾಗಿಲಿಗೆ ಬೆಂಕಿ ಹಚ್ಚಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಟ್ನಾ ಗ್ರಾಮದ ಬಳಿಯ ಕೆಂಪಮ್ಮ ದೇವಿ ದೇವಾಲಯದಲ್ಲಿ ನಡೆದಿದೆ.

Advertisement

ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಇರುವ ಕೆಂಪಮ್ಮ ದೇವಿ ದೇವಾಲಯಕ್ಕೆ ಮಂಗಳವಾರ ಸಂಜೆ ಯಾರೂ ಇಲ್ಲದ್ದನ್ನು ಗಮನಿಸಿ ಪಶ್ಚಿಮದ ಬಾಗಿಲಿಗೆ ವಾಮಾಚಾರ ಮಾಡಿದ್ದಾರೆ. ನಂತರ ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಸಂಪೂರ್ಣ ಬಾಗಿಲಿಗೆ ಬೆಂಕಿ ಆವರಿಸಿದೆ.

ಇಂದು ಬೆಳಗಿನ ಜಾವ ಪೂಜಾ ಕೈಂಕರ್ಯಗಳನ್ನು ನಡೆಸಲು ಗ್ರಾಮಸ್ಥರು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಯಿಂದ ದೇವಸ್ಥಾನದ ಬಾಗಿಲು ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳದಲ್ಲಿ ವಾಮಾಚಾರಕ್ಕೆ ಬಳಸಿದ್ದ ಬೊಂಬೆ, ಕುಂಕುಮ, ತಾಮ್ರದ ತಗಡು ವಸ್ತುಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕಿಬ್ಬನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here