ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ವಿದ್ಯಾರ್ಥಿಗಳಿಗೆ ಚಾಕು ಇರಿದ ದುಷ್ಕರ್ಮಿಗಳು!

0
Anjali Ambigera murder case
Spread the love

ಬೆಳಗಾವಿ:-ನಗರದ ಚೆನ್ನಮ್ಮ ವೃತ್ತದ ಬಳಿ ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ವೇಳೆ ಮೂವರು ಹಾಸ್ಟೆಲ್​ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚಾಕು ಇರಿದಿರುವ ಘಟನೆ ಜರುಗಿದೆ.

Advertisement

ಕ್ಷುಲ್ಲಕ ವಿಷಯಕ್ಕೆ ಕಿರಿಕ್​ ತೆಗೆದು, ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾರೆ. ಸಮಾಜ ಕಲ್ಯಾಣ ವಸತಿ ನಿಲಯದ ಮೂವರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಹೊಟ್ಟೆ, ಕತ್ತು, ಬೆನ್ನಿನ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದೆ. ಬೆಳಗಾವಿಯ ಚರ್ಚ್​ ಗಲ್ಲಿಯ ಯುವಕರ ಗ್ಯಾಂಗ್​ನಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ.

ಘಟನೆಯಲ್ಲಿ ಪ್ರವೀಣ್ ಗುಂಡ್ಯಾಗೋಳ್​ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಗೂ ದರ್ಶನ್​​ ಪಾಟೀಲ್​, ಸತೀಶ್​​ ಪೂಜಾರಿಗೆ ಬಿಮ್ಸ್​​ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನು ಮತ್ತೊಂದೆಡೆ ಚಾಕು ಇರಿದು ಪರಾರಿಯಾಗುತ್ತಿದ್ದ ಮೂವರು ಆರೋಪಿಗಳನ್ನು ಎಪಿಎಂಸಿ ಠಾಣೆ ಪೊಲೀಸರು ಬೆನ್ನತ್ತಿ ಚೇಸ್​ ಮಾಡಿ ಹಿಡಿದಿದ್ದಾರೆ. ಬೈಕ್​ನಲ್ಲಿ ಪರಾರಿಯಾಗುತ್ತಿದ್ದ ಮೂವರು ಆರೋಪಿಗಳು ವಿಶ್ವೇಶ್ವರಯ್ಯನಗರದಲ್ಲಿ ಸೆರೆಯಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here