ಕೊಪ್ಪಳ:-ಬೈಕ್ ವ್ಹೀಲಿಂಗ್ ತಡೆದ ಕಾನ್ಸ್ ಟೇಬಲ್ ಗೆ ಪುಂಡರು ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ಹೊರವಲಯದಲ್ಲಿ ಜರುಗಿದೆ.
Advertisement
ಘಟನೆ ಸಂಬಂಧ ಹಲ್ಲೆ ನಡೆಸಿದ ರೌಡಿಶೀಟರ್ ಅರ್ಬಾಜ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಗಂಗಾವತಿ ಹೊರವಲಯದಲ್ಲಿ ಪುಂಡರು ಬೈಕ್ ವ್ಹೀಲಿಂಗ್ ಮಾಡುತ್ತಿದ್ದರು. ಅದನ್ನು ತಡೆಯಲು ಮುಂದಾದ ಗಂಗಾವತಿ ಗ್ರಾಮಾಂತರ ಠಾಣೆ ಕಾನ್ಸ್‌ಟೇಬಲ್ ಬಸವರಾಜುಗೆ ಥಳಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಮತ್ತೊಬ್ಬ ಕಾನ್ಸ್‌ಟೇಬಲ್ ಮೇಲೂ ಹಲ್ಲೆಗೆ ಪ್ರಯತ್ನ ಮಾಡಲಾಗಿದೆ.
ಸದ್ಯ ಕಾನ್ಸ್‌ಟೇಬಲ್ ಬಸವರಾಜುವನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಶಕ್ಕೆ ಪಡೆದವರನ್ನು ಗಂಗಾವತಿ ಗ್ರಾಮೀಣ ಠಾಣೆಗೆ ಪೊಲೀಸರು ಕರೆತಂದಿದ್ದಾರೆ ಎಂದು ತಿಳಿದು ಬಂದಿದೆ.