HomeEntertainmentಪೋಷಕರ ಲೈಂಗಿಕತೆ ಬಗ್ಗೆ ವಿಕೃತ ಹೇಳಿಕೆ: ಖ್ಯಾತ ಯೂಟ್ಯೂಬರ್‌ ರಣವೀರ್ ಅಲ್ಲಾಬಾಡಿಯಾ ಮೇಲೆ ಕೇಸ್‌

ಪೋಷಕರ ಲೈಂಗಿಕತೆ ಬಗ್ಗೆ ವಿಕೃತ ಹೇಳಿಕೆ: ಖ್ಯಾತ ಯೂಟ್ಯೂಬರ್‌ ರಣವೀರ್ ಅಲ್ಲಾಬಾಡಿಯಾ ಮೇಲೆ ಕೇಸ್‌

For Dai;y Updates Join Our whatsapp Group

Spread the love

‘ಇಂಡಿಯಾಸ್‌ ಗಾಟ್‌ ಲೆಟೆಂಟ್‌’ ಕಾಮಿಡಿ ರಿಯಾಲಿಟಿ ಶೋನಲ್ಲಿ ಪೋಷಕರ ಲೈಂಗಿಕತೆ ಬಗ್ಗೆ ಮಾತನಾಡಿ ಖ್ಯಾತ ಯುಟ್ಯೂಬರ್‌ ರಣವೀರ್‌ ಅಲ್ಲಾಬಾಡಿಯಾ ವಿವಾದ ಸೃಷ್ಟಿಸಿದಸ್ದಾರೆ. ಈ ಬಗ್ಗೆ ರಣವೀರ್‌ ವಿರುದ್ಧ ದೂರು ದಾಖಲಾಗಿದೆ. ಯಾವಾಗ ತಮ್ಮ ಹೇಳಿಕೆ ಟೀಕೆಗೆ ಗುರಿಯಾಗಿದೆ ಎಂಬುದು ಗೊತ್ತಾಯ್ತು ತಕ್ಷಣವೇ ರಣವೀರ್‌ಗೆ ಅರಿವಾಯ್ತೋ ಸೋಷಿಯಲ್‌ ಮೀಡಿಯಾ ಮೂಲಕ ಕ್ಷಮೆ ಕೇಳಿದ್ದಾರೆ.

‘ಇಂಡಿಯಾಸ್‌ ಗಾಟ್‌ ಲೆಟೆಂಟ್‌’ ಕಾಮಿಡಿ ರಿಯಾಲಿಟಿ ಶೋಗೆ ಬಂದಿದ್ದ ಸ್ಪರ್ಧಿಯೊಬ್ಬರ ಬಳಿ ಪೋಷಕರ ಲೈಂಗಿಕತೆಯ ಬಗ್ಗೆ ರಣವೀರ್‌ ಕೇಳಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದಂತೆಯೇ ನೆಟ್ಟಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ರಣವೀರ್‌ ಅಲ್ಲಾಬಾದಿಯಾ ಅವರ ಪಾಡ್‌ಕಾಸ್ಟ್‌ ಅನ್ನು ನಿಷೇಧಿಸುವಂತೆ ಆಗ್ರಹ ಕೇಳಿಬಂದಿತ್ತು. ಅಲ್ಲದೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಸೇರಿದಂತೆ ಹಲವು ನಾಯಕರೂ ರಣವೀರ್‌ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದರು. ಈ ಸಂಬಂಧ ಪೊಲೀಸರು ದೂರು ಸಹ ದಾಖಲಿಸಿಕೊಂಡಿದ್ದಾರೆ.
ತಮ್ಮ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದಂತೆಯೇ, ವಿಡಿಯೋ ಮೂಲಕ ಕ್ಷಮೆ ಕೇಳಿರುವ ರಣವೀರ್‌ ಅಲ್ಲಾಬಾಡಿಯಾ, “ನನ್ನ ಹೇಳಿಕೆ ಸರಿಯಲ್ಲ, ಅದು ತಮಾಷೆಯೂ ಅಲ್ಲ. ಈ ಬಗ್ಗೆ ಎಲ್ಲರಲ್ಲೂ ಕ್ಷಮೆ ಕೇಳುತ್ತೇನೆ. ವೇದಿಕೆಗಳನ್ನು ಈ ರೀತಿಯೇ ಬಳಸಿಕೊಳ್ಳುತ್ತೀರಾ ಎಂದು ಹಲವರು ಕೇಳಿದ್ದೀರಿ. ಖಂಡಿತವಾಗಿ, ಈ ರೀತಿಯಾಗಿ ವೇದಿಕೆಯನ್ನು ಬಳಸಿಕೊಳ್ಳಲು ಇಷ್ಟಪಡುವುದಿಲ್ಲ. ಈಗ ಏನಾಗಿದೆಯೋ ಅದರ ಬಗ್ಗೆ ಯಾವುದೇ ವಿವರಣೆ, ಕಾರಣ ಅಥವಾ ಸ್ಪಷ್ಟನೆ ನೀಡುವುದಿಲ್ಲ. ನಿಮ್ಮ ಬಳಿ ಕ್ಷಮೆಯನ್ನು ಕೇಳುತ್ತೇನೆ’’ ಎಂದು ಹೇಳಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!