ಸಿಎಂ ಸಲಹೆಗಾರ ಸ್ಥಾನಕ್ಕೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ..!

0
Spread the love

ಬೆಂಗಳೂರು: ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಬಿ ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರವಾನಿಸಿದ್ದಾರೆ. ಆದ್ರೆ, ಬಿಆರ್ ಪಾಟೀಲ್ ಅವರ ಈ ನಿರ್ಧಾರ ರಾಜಕೀಯದಲ್ಲಿ ಅಚ್ಚರಿ ಉಂಟು ಮಾಡಿದೆ.

Advertisement

ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ತಮಗೆ ಯಾವುದೇ ಸ್ಥಾನಮಾನವಿಲ್ಲ ಎಂದು ಕೆಲ ಹಿರಿಯ ಶಾಸಕರು ಅಸಮಾಧಾನಗೊಂಡಿದ್ದರು. ಆರ್​​ವಿ ದೇಶಪಾಂಡೆ, ಬಸವರಾಜ್ ರಾಯರೆಡ್ಡಿ ಹಾಗೂ ಬಿಆರ್ ಪಾಟೀಲ್​ ಸಹ ಬೇಸರಗೊಂಡಿದ್ದರು. ಹೀಗಾಗಿ ಬಂಡಾಯ ಎದ್ದಿದ್ದ ಶಾಸಕರಿಗೆ ವಿಶೇಷ ಹುದ್ದೆಗಳ ಸ್ಥಾನ ಮಾನ ನೀಡಲಾಗಿತ್ತು.

ಬಸವರಾಜ ರಾಯರೆಡ್ಡಿ ಅವರಿಗೆ ಸಿಎಂ ಆರ್ಥಿಕ ಹುದ್ದೆ, ಬಿಆರ್‌ ಪಾಟೀಲ್‌ ಅವರನ್ನು ಸಿಎಂ ರಾಜಕೀಯ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. ಹಾಗೇ ಆರ್‌ವಿ ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು, ಆದ್ರೆ, ಇದೀಗ ಬಿಆರ್ ಪಾಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here