ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಸಮೀಪದ ಲಾಡ್ಜ್ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೃತರನ್ನು ದಾವಣಗೆರೆ ಮೂಲದ ಶಿವಕುಮಾರ್ ಎಂದು ಗುರುತಿಸಲಾಗಿದೆ. ಅವರು ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ವೈಯಕ್ತಿಕ ಸಹಾಯಕ (ಪಿಎ) ಆಗಿ ಕೆಲಸ ಮಾಡುತ್ತಿದ್ದರು.
ಮಾಹಿತಿಯ ಪ್ರಕಾರ ಶಿವಕುಮಾರ್ ಅವರು ಹೆಚ್ಚಿನ ಸಾಲ ಮಾಡಿಕೊಂಡಿದ್ದರೆಂದು ತಿಳಿದುಬಂದಿದ್ದು, ಕೆಲ ದಿನಗಳ ಹಿಂದೆ ಕೆಲಸದಿಂದಲೂ ತೆಗೆಯಲಾಗಿತ್ತು ಎಂದು ಹೇಳಲಾಗಿದೆ.
ಘಟನೆ ನಡೆದ ದಿನ ಅವರು ತಮ್ಮ ಪತ್ನಿಗೆ ವಿಡಿಯೋ ಕಾಲ್ ಮಾಡಿ “ನನಗೆ ಜೀವನ ಸಾಕಾಗಿದೆ, ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ಹೇಳಿ ಫೆಬ್ರವರಿ 17ರಂದು ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಯುಡಿಆರ್ (ಅಸ್ವಾಭಾವಿಕ ಸಾವು) ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



