ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ರೋಣ ಮತಕ್ಷೇತ್ರದಿಂದ ನಾಲ್ಕು ಬಾರಿ ಕಾಂಗ್ರೆಸ್ ಪಕ್ಷದ ಶಾಸಕರಾಗಿ ಆಯ್ಕೆಯಾಗಿರುವ, ನಿಷ್ಠಾವಂತ ಶಾಸಕ ಜಿ.ಎಸ್. ಪಾಟೀಲರಿಗೆ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಪ.ಪಂ ಸ್ಥಾಯಿ ಕಮಿಟಿ ಚೇರ್ಮನ್ ಮುತ್ತಪ್ಪ ನೂಲ್ಕಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರೋಣ ಮತಕ್ಷೇತ್ರದಲ್ಲಿ ಶಾಸಕರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ. ಅಲ್ಲದೆ, ಗದಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಜವಾಬ್ದಾರಿಯೊಂದಿಗೆ ಜಿಲ್ಲೆಯ ಪ್ರತಿಯೊಂದು ಮತಕ್ಷೇತ್ರಗಳಲ್ಲಿ ಸಂಚರಿಸಿ ಪಕ್ಷವನ್ನು ಸಮರ್ಥವಾಗಿ ಗಟ್ಟಿಯಾಗಿಸಿರುವ ಕೀರ್ತಿಗೆ ಸಲ್ಲುತ್ತದೆ. ಆದ್ದರಿಂದ ರೋಣ ಮತಕ್ಷೇತ್ರದ ಶಾಸಕರಾದ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನವನ್ನು ನೀಡಿ ಅಭಿವೃದ್ಧಿಗೆ ಆದ್ಯತೆ ನೀಡಲು ಪಕ್ಷದ ವರಿಷ್ಠರು ಮುಂದಾಗಬೇಕು. ಒಂದು ಅವರಿಗೆ ಸಚಿವ ಸ್ಥಾನ ದೊರೆಯದಿದ್ದರೆ ನಾನೂ ಸೇರಿದಂತೆ ಪಟ್ಟಣ ಪಂಚಾಯಿತಿಯ ಹಲವು ಸದಸ್ಯರು ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಸಾಮೂಹಿಕವಾಗಿ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಆಗ್ರಹಿಸಿದ್ದಾರೆ.