ಬೆಂಗಳೂರು: ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಜಾತಿನಿಂದನೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು. ಶಾಸಕ ಮುನಿರತ್ನ ಪರ ವಕೀಲರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು, ನ್ಯಾಯಾಧೀಶರು ಇಂದಿಗೆ ಮುಂದೂಡಿದ್ದರು. ಜೊತೆಗೆ ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದರು.
Advertisement
ಗುತ್ತಿಗೆದಾರನಿಗೆ ಕೊಲೆ ಬೆದರಿಕೆ ಹಾಗೂ ಜಾತಿನಿಂದನೆ ಕೇಸ್ ನಲ್ಲಿ, ಬಂಧನವಾಗಿರುವ ಬಿಜೆಪಿ ಶಾಸಕ ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಬೆಂಗಳೂರಿನ 92ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಇಂದೇ ಆಕ್ಷೇಪಣೆ ಸಲ್ಲಿಕೆಗೆ ಸರ್ಕಾರಿ ಅಭಿಯೋಜಕರಿಗೆ ಕೂಡ ಸೂಚನೆ ನೀಡಿದೆ.