ಬೆಂಗಳೂರು: ರಾಜಧಾನಿ ಬೆಂಗಳೂರಿನ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ಮತ್ತೆ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದು, ಜೈಲು ಆಡಳಿತದ ಭದ್ರತಾ ಲೋಪವನ್ನು ಎತ್ತಿಹಿಡಿದಿದೆ. ಜೈಲಿನೊಳಗೆ ಒಂದು ಮೊಬೈಲ್ ಫೋನ್ ಹಾಗೂ ಮೂರು ಸಿಮ್ ಕಾರ್ಡ್‌ಗಳು ಸಿಕ್ಕಿದ್ದು, ಈ ಸಂಬಂಧ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಜೈಲಿನೊಳಗೆ ಅಕ್ರಮವಾಗಿ ಮೊಬೈಲ್ ಬಳಸುತ್ತಿದ್ದ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಜೈಲು ಅಧಿಕಾರಿ ಕೊಟ್ರೇಶ್ ನೀಡಿದ ದೂರಿನ ಆಧಾರದ ಮೇಲೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕಟ್ಟುನಿಟ್ಟಿನ ಭದ್ರತೆ ಇರುವ ಕಾರಾಗೃಹದೊಳಗೆ ನಿಷೇಧಿತ ಮೊಬೈಲ್ ಮತ್ತು ಸಿಮ್ ಕಾರ್ಡ್‌ಗಳು ಹೇಗೆ ಪ್ರವೇಶಿಸಿದವು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮೊಬೈಲ್ ಹಾಗೂ ಸಿಮ್‌ಗಳನ್ನು ಜೈಲಿನೊಳಗೆ ಬಿಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.



