ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.
ಕಲಬುರಗಿಯಲ್ಲಿ 40.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 40.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 33.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 39.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.