ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆ ಆಗಿದೆ. ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಆಗಿದೆ. ಇನ್ನೂ 17ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 6ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಹೊನ್ನಾವರದಲ್ಲಿ32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.