HomePolitics Newsಮೋದಿ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ: ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ

ಮೋದಿ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ: ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ

For Dai;y Updates Join Our whatsapp Group

Spread the love

ವಿಜಯಪುರ: ಗ್ಯಾಸ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜನರ ಮೇಲೆ ಕಾಳಜಿ ಇಲ್ಲದೆ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮೋದಿ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ಜನರು ಹಾಳಾಗಿ ಹೋಗಲಿ ಎಂಬಂತೆ ಬೆಲೆಗಳನ್ನು ಹೆಚ್ಚಿಸುತ್ತಿದೆ” ಎಂದು ಕಿಡಿಕಾರಿದರು.

ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಕಡಿಮೆ ಇದ್ದಾಗಲೂ ಜನರಿಗೆ ಅದರ ಲಾಭ ನೀಡಲಾಗಲಿಲ್ಲ ಎಂದು ಆರೋಪಿಸಿದ ಅವರು, ಆಗಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಲಾಗಿತ್ತು ಎಂದು ಹೇಳಿದರು. ಈಗ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾದ ಕಾರಣ ಮತ್ತೆ ದರ ಹೆಚ್ಚಳವಾಗುತ್ತಿದೆ ಎಂದು ಟೀಕಿಸಿದರು.

ಕಚ್ಚಾ ತೈಲ ಬೆಲೆ ಕಡಿಮೆಯಾಗಿದ್ದ ಸಮಯದಲ್ಲಿ ಜನರಿಗೆ ಇಂಧನ ದರ ಕಡಿಮೆ ಮಾಡಿದರೆ ಇಂದು ಈ ರೀತಿಯ ಹೊರೆ ಬೀಳುತ್ತಿರಲಿಲ್ಲ. ಇಂದಿನ ಬೆಲೆ ಏರಿಕೆ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೆಚ್ಚಿಸುವುದರ ಜೊತೆಗೆ ಆರ್ಥಿಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಇದೇ ವೇಳೆ ‘ಕಾಕ್ರೋಚ್ ಜನತಾ ಪಕ್ಷ’ದ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ ಹಕ್ಕು ಇದೆ. ಅವರು ಒಳ್ಳೆಯ ಉದ್ದೇಶದಿಂದ ಪ್ರತಿಭಟನೆ ಮಾಡುತ್ತಿರುವುದಾಗಿ ತಿಳಿದುಬರುತ್ತಿದೆ ಎಂದು ಹೇಳಿ, ಪ್ರತಿಭಟನೆ ಮುಂದುವರಿಸಲು ಅವಕಾಶ ನೀಡಬೇಕು ಎಂದು ಅಭಿಪ್ರಾಯಪಟ್ಟರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!