ಪ್ರಧಾನಿ, ಸಿಎಂ, ಸಚಿವರನ್ನು ಪದಚ್ಯುತಿಗೊಳಿಸುವ ಮಸೂದೆ ಬಗ್ಗೆ ಮೋದಿ ಖಡಕ್ ಮಾತು!

0
Spread the love

ಪಾಟ್ನಾ:- ಪ್ರಧಾನಿ, ಸಿಎಂ, ಸಚಿವರನ್ನು ಪದಚ್ಯುತಿಗೊಳಿಸುವ ಮಸೂದೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಕ್ರಿಮಿನಲ್ ಹಿನ್ನೆಲೆಯ ಜನಪ್ರತಿನಿಧಿಗಳನ್ನು ವಜಾಗೊಳಿಸುವ ಗುರಿಯನ್ನು ಮಸೂದೆಯು ಹೊಂದಿದೆ. ಪ್ರಮುಖ ಹುದ್ದೆಗಳನ್ನು ಹೊಂದಿರುವ ಜನರು ಜೈಲಿನಿಂದ ಕಾರ್ಯನಿರ್ವಹಿಸಲು ಅವಕಾಶ ನೀಡಬಾರದು ಎಂದು ತಿಳಿಸಿದ್ದಾರೆ.

ಬಂಧನಕ್ಕೆ ಒಳಗಾಗಿ 30 ದಿನ ಜೈಲಿನಲ್ಲಿದ್ದರೆ ಪ್ರಧಾನಿ, ಮುಖ್ಯಮಂತ್ರಿ, ಸಚಿವರನ್ನು ಪದಚ್ಯುತಿಗೊಳಿಸಲು ಅನುವು ಮಾಡಿಕೊಡುವ ಸಂವಿಧಾನ ತಿದ್ದುಪಡಿಯ ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ.

ಇನ್ನೂ ಲೋಕಸಭೆಯಲ್ಲಿ ಮಸೂದೆ ಮಂಡನೆ ವೇಳೆ ಕೋಲಾಹಲ ಸೃಷ್ಟಿಯಾಗಿತ್ತು. ಸರ್ಕಾರದ ಪ್ರಸ್ತಾವಕ್ಕೆ ‘ಇಂಡಿಯಾ’ ಕೂಟದ ಸಂಸದರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಗದ್ದಲ ಎಬ್ಬಿಸಿದ್ದರು.


Spread the love

LEAVE A REPLY

Please enter your comment!
Please enter your name here