HomeIndia Newsಮತ್ತೆ ಮಧ್ಯರಾತ್ರಿ ಮೋದಿ ವಿಡಿಯೋ! ಪೇಪರ್ ಲೀಕ್ ಮಾಫಿಯಾಗೆ ಖಡಕ್ ಎಚ್ಚರಿಕೆ

ಮತ್ತೆ ಮಧ್ಯರಾತ್ರಿ ಮೋದಿ ವಿಡಿಯೋ! ಪೇಪರ್ ಲೀಕ್ ಮಾಫಿಯಾಗೆ ಖಡಕ್ ಎಚ್ಚರಿಕೆ

For Dai;y Updates Join Our whatsapp Group

ನವದೆಹಲಿ: ಇತ್ತೀಚೆಗೆ ಮಧ್ಯರಾತ್ರಿ ಸೆಲ್ಫೀ ವಿಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ, ನಿನ್ನೆ ಮಧ್ಯರಾತ್ರಿ ಮತ್ತೊಂದು ಸೆಲ್ಫೀ ವಿಡಿಯೋ ಬಿಡುಗಡೆ ಮಾಡಿದ್ದಾರೆ.

ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ–2026 ಕುರಿತು ಮಾತನಾಡಿರುವ ಅವರು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ.

“ಪ್ರಶ್ನೆಪತ್ರಿಕೆ ಸೋರಿಕೆ ಮಾಫಿಯಾ, ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗಿರುವ ಯಾವುದೇ ಗ್ಯಾಂಗ್ ಹಾಗೂ ದೇಶದ ಮಕ್ಕಳ ಭವಿಷ್ಯದೊಂದಿಗೆ ಆಟವಾಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಇಂತಹವರ ವಿರುದ್ಧ ಕಾನೂನಿನಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ.

ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕ ಮತ್ತು ವಿಶ್ವಾಸಾರ್ಹವಾಗಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸುತ್ತಿದೆ. ಫಾಸ್ಟ್-ಟ್ರ್ಯಾಕ್ ವ್ಯವಸ್ಥೆ, ವಿವಿಧ ಪಾಲುದಾರರ ಸಲಹೆಗಳ ಆಧಾರದ ಮೇಲೆ ಸಾಂಸ್ಥಿಕ ಸುಧಾರಣೆಗಳು ಹಾಗೂ ರಾಜ್ಯ ಸರ್ಕಾರಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ದಶಕಗಳಿಂದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆಯುತ್ತಿದ್ದು, ಅದನ್ನು ತಡೆಯಲು ಕಠಿಣ ಕಾನೂನಿನ ಅಗತ್ಯವಿತ್ತು. ಇದೇ ಉದ್ದೇಶದಿಂದ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕವನ್ನು ಸಂಸತ್ತಿನಲ್ಲಿ ಮಂಡಿಸಲಾಗಿದ್ದು, ಉಭಯ ಸದನಗಳಲ್ಲಿ ಚರ್ಚೆಯ ಬಳಿಕ ಅಂಗೀಕಾರವಾಗಿದೆ ಎಂದು ಪ್ರಧಾನಿ ಹೇಳಿದರು.

ವಿರೋಧ ಪಕ್ಷಗಳ ಸಭಾತ್ಯಾಗದ ನಡುವೆಯೇ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ–2026 ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ಈ ವಿಧೇಯಕವು ಈಗಾಗಲೇ ಲೋಕಸಭೆಯಲ್ಲೂ ಅಂಗೀಕಾರವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅಂಕಿತಕ್ಕಾಗಿ ಕಳುಹಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img