ನಾಗ್ಪುರ: ಪ್ರಧಾನಿ ನರೇಂದ್ರ ಮೋದಿಯವರು ನಾಗ್ಪುರದ ರೇಶಿಂಬಾಗ್‌ನಲ್ಲಿರುವ ಆರ್‌ಎಸ್‌ಎಸ್ ಪ್ರಧಾನ ಕಚೇರಿ ಹೆಡ್ಗೆವಾರ್ ಸ್ಮೃತಿ ಭವನಕ್ಕೆ ಭೇಟಿ ನೀಡಿದ್ದಾರೆ. ಆರ್‌ಎಸ್‌ಎಸ್ ಸಂಸ್ಥಾಪಕ ಡಾ. ಹೆಡ್ಗೆವಾರ್ ಮತ್ತು ಮಾಧವ ಸದಾಶಿವ ಗೋಲ್ವಾಲ್ಕರ್ ಅವರ ಸಮಾಧಿಗೆ ನಮನ ಸಲ್ಲಿಸಿದರು.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ನಾಗ್ಪುರ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಿದರು.
ಅವರು ಸೋಲಾರ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಲಿಮಿಟೆಡ್‌ನ ಯುದ್ಧಸಾಮಗ್ರಿ ಸೌಲಭ್ಯಕ್ಕೂ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿ ಅವರು ನಾಗ್ಪುರದಲ್ಲಿ ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಈ ಕೇಂದ್ರವು 2014 ರಲ್ಲಿ ಗುರೂಜಿ ಗೋಲ್ವಾಲ್ಕರ್ ಅವರ ಸ್ಮರಣಾರ್ಥ ಸ್ಥಾಪಿಸಲಾದ ಮಾಧವ ನೇತ್ರಾಲಯ ಕಣ್ಣಿನ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ವಿಸ್ತರಣೆಯಾಗಲಿದೆ.