ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನ ಮಹಿಳಾ ಮೀಸಲಾತಿ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ವಾಗತ ಸೂಚಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, “ದೇಶವು ಮಹಿಳಾ ಸಬಲೀಕರಣದತ್ತ ಐತಿಹಾಸಿಕ ಹೆಜ್ಜೆ ಇಡಲು ಸಜ್ಜಾಗಿದೆ” ಎಂದು ತಿಳಿಸಿದ್ದಾರೆ.
आज से शुरू हो रही संसद की विशेष बैठक में हमारा देश नारी सशक्तिकरण के लिए ऐतिहासिक कदम उठाने जा रहा है। हमारी माताओं-बहनों का सम्मान राष्ट्र का सम्मान है और यही भावना लेकर हम इस दिशा में दृढ़ता से आगे बढ़ रहे हैं।
व्युच्छन्ती हि रश्मिभिर्विश्वमाभासि रोचनम्।
ता त्वामुषर्वसूयवो… pic.twitter.com/8KWT1WLSje
— Narendra Modi (@narendramodi) April 16, 2026
ಇಂದಿನಿಂದ ಆರಂಭವಾಗುತ್ತಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದ ಮಹತ್ವದ ಚರ್ಚೆಗಳು ನಡೆಯಲಿವೆ. “ನಮ್ಮ ತಾಯಂದಿರು ಮತ್ತು ಸಹೋದರಿಯರಿಗೆ ನೀಡುವ ಗೌರವವೇ ರಾಷ್ಟ್ರಕ್ಕೆ ನೀಡುವ ಗೌರವ” ಎಂದು ಮೋದಿ ಬರೆದುಕೊಂಡಿದ್ದಾರೆ.
ಇದಲ್ಲದೆ, ಮಹಿಳೆಯರು ಸಮಾಜದಲ್ಲಿ ಜ್ಞಾನ ಹರಡುವಲ್ಲಿ ಹಾಗೂ ಅಜ್ಞಾನವನ್ನು ದೂರ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ ಎಂಬ ಅರ್ಥದ ಸಂಸ್ಕೃತ ಶ್ಲೋಕವನ್ನೂ ಅವರು ಹಂಚಿಕೊಂಡಿದ್ದಾರೆ.
ಏಪ್ರಿಲ್ 16ರಿಂದ 18ರವರೆಗೆ ನಡೆಯಲಿರುವ ಈ ವಿಶೇಷ ಅಧಿವೇಶನದಲ್ಲಿ, 2029ರ ಸಾರ್ವತ್ರಿಕ ಚುನಾವಣೆಗಳಿಂದ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿ ಜಾರಿಗೆ ತರಲು ಸಂಬಂಧಿಸಿದ ತಿದ್ದುಪಡಿ ಮಸೂದೆ ಚರ್ಚೆಗೆ ಬರಲಿದೆ ಎಂದು ನಿರೀಕ್ಷಿಸಲಾಗಿದೆ.



